ADVERTISEMENT

ಹರಪನಹಳ್ಳಿ: ಸರ್ಕಾರಿ ನೌಕರರೆಂದು ಘೋಷಿಸಲು ಗ್ರಾಮ ಪಂಚಾಯಿತಿ ಸಿಬ್ಬಂದಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 6:39 IST
Last Updated 23 ನವೆಂಬರ್ 2025, 6:39 IST
ಹರಪನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು
ಹರಪನಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು   

ಹರಪನಹಳ್ಳಿ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್, ನೀರಗಂಟಿ, ಜವಾನ, ಸ್ವಚ್ಛತಾಗಾರರನ್ನು ಸರ್ಕಾರಿ ನೌಕರರೆಂದು ಘೋಷಿಸುವಂತೆ ಒತ್ತಾಯಿಸಿ ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಅವರ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮ ಪಂಚಾಯಿತಿ ನೌಕರರಿಗೆ ₹36,000 ಕನಿಷ್ಠ ವೇತನ ನೀಡಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು. ನೌಕರರು ನಿವೃತ್ತರಾದರೆ ಅಥವಾ ಮರಣ ಹೊಂದಿದರೆ ಅವರಿಗೆ ₹10 ಲಕ್ಷ ಇಡಗಂಟು ನೀಡಬೇಕು. ₹1.20 ಲಕ್ಷ ಆದಾಯ ಮಿತಿ ಇರುವ ನೌಕರರು ಮತ್ತು ಕಾರ್ಮಿಕರ ಪಡಿತರ ಚೀಟಿ ರದ್ದುಪಡಿಸಬಾರದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಪೂಜಾರ, ಹುಲಿಕಟ್ಟೆ ಪಕ್ಕೀರಪ್ಪ, ಹೊನ್ನಪ್ಪ, ಕರಿಯಪ್ಪ, ಜಗದೀಶ್, ಹುಲಿಗೆಮ್ಮ, ರೇಣುಕಮ್ಮ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.