ಹೊಸಪೇಟೆ (ವಿಜಯನಗರ): ಭಾರತದಲ್ಲಿನ ಪೆರು ದೇಶದ ರಾಯಭಾರಿ ಕಾರ್ಲೊಸ್ ರಫೇಲ್ ಪೋಲೋ ಅವರು ಸೋಮವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.
ಪತ್ನಿಯೊಂದಿಗೆ ಮೂರು ದಿನಗಳ ಹಂಪಿ ಪ್ರವಾಸ ಕೈಗೊಂಡಿರುವ ಅವರು ಮೊದಲ ದಿನ ವಿರೂಪಾಕ್ಷೇಶ್ವರ ದೇವಸ್ಥಾನ, ಮಹಾನವಮಿ ದಿಬ್ಬ, ರಾಣಿ ಸ್ನಾನಗೃಹ, ತುಂಗಭದ್ರಾ ಜಲಾಶಯ ವೀಕ್ಷಿಸಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.