
ಹರಪನಹಳ್ಳಿ: ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸಲು ಸರ್ಕಾರ ಮತ್ತು ಶಿಕ್ಷಕರ ನಡುವೆ ಸೇತುವೆಯಾಗಿ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.
ನಗರದ ತೆಗ್ಗಿನಮಠ ಸಭಾಂಗಣದಲ್ಲಿ ಶನಿವಾರ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾಮಟ್ಟದ ದೈಹಿಕ ಶಿಕ್ಷಕ ಶಿಕ್ಷಣ ಶಿಕ್ಷಕರ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
‘ಮಕ್ಕಳ ಬಲವರ್ಧನೆಗಾಗಿ ದೇಸಿ ಕ್ರೀಡೆಗಳನ್ನು ಹೆಚ್ಚು ಪ್ರೋತ್ಸಾಹಿಸಿ, ಅದರ ಜೊತೆ ವಿದೇಶಿ ಕ್ರೀಡೆ ಕಲಿಸಿ. ದೇಹ ಮತ್ತು ಮನಸ್ಸು ಸದಾ ಕ್ರಿಯಾಶೀಲವಾಗಿರುವ ಕ್ರೀಡೆಗಳನ್ನು ಅಭ್ಯಾಸ ಮಾಡಿಸಲು ಶಿಕ್ಷಕರು ಪ್ರಯತ್ನಿಸಿ’ ಎಂದರು.
ಚೆನ್ನವೀರಸ್ವಾಮಿ, ಶೈಲಜಾ, ರಾಜಣ್ಣ ಸೇರಿದಂತೆ 36 ಜನ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸನ್ಮಾನಿಸಿ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂಘದ ರಾಜ್ಯ ಉಪಾಧ್ಯಕ್ಷ ರಾಜು ದೊಡ್ಡಮನಿ, ಸಂಘಟನಾ ಕಾರ್ಯದರ್ಶಿ ರಮೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶ್ರೀಕಾಂತ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ, ಜಿ.ಪದ್ಮಲತಾ, ತಾಲ್ಲೂಕು ಅಧ್ಯಕ್ಷ ಟಿ.ಎಂ.ಜಯಪ್ರಕಾಶ್, ದೇವರಾಜ್, ಲಕ್ಯನಾಯ್ಕ, ಸೋಮಪ್ಪ, ರಫೀಕ್ ಖವಾಸ್, ಎಚ್.ಕೆ.ಚಂದ್ರಪ್ಪ, ಪ್ರಭು, ಪರಶುರಾಮ್, ಅಂಜಿನಪ್ಪ, ಅಬ್ದುಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.