ADVERTISEMENT

ಪ್ಲಾಸ್ಟಿಕ್‌ ದುಷ್ಪರಿಣಾಮದ ವಸ್ತು ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 14:23 IST
Last Updated 1 ನವೆಂಬರ್ 2019, 14:23 IST
ವಸ್ತು ಪ್ರದರ್ಶನದಲ್ಲಿ ಇರಿಸಲಾಗಿರುವ ಕಾಗದದ ವಸ್ತುಗಳನ್ನು ವೀಕ್ಷಿಸುತ್ತಿರುವ ಸಾರ್ವಜನಿಕರು
ವಸ್ತು ಪ್ರದರ್ಶನದಲ್ಲಿ ಇರಿಸಲಾಗಿರುವ ಕಾಗದದ ವಸ್ತುಗಳನ್ನು ವೀಕ್ಷಿಸುತ್ತಿರುವ ಸಾರ್ವಜನಿಕರು   

ಹೊಸಪೇಟೆ: ಪ್ಲಾಸ್ಟಿಕ್‌ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಇಲ್ಲಿನ ನಗರಸಭೆ ಕಚೇರಿ ಆವರಣದಲ್ಲಿ ಪ್ಲಾಸ್ಟಿಕ್‌ ವಸ್ತುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಪ್ಲಾಸ್ಟಿಕ್‌ ಬಳಕೆಯಿಂದ ಮರ, ಗಿಡಗಳು, ಜಲಚರಗಳಿಗೆ ಆಗುತ್ತಿರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಾಗಿದೆ. ಸಾಂಕೇತಿಕವಾಗಿ ಪ್ಲಾಸ್ಟಿಕ್‌ ಮರ, ಪ್ಲಾಸ್ಟಿಕ್‌ ಮೀನಿನ ಪ್ರತಿಕೃತಿ ಇಡಲಾಗಿದ್ದು, ಅದು ಎಲ್ಲರ ಗಮನ ಸೆಳೆಯುತ್ತಿದೆ.

ಪ್ಲಾಸ್ಟಿಕ್‌ ವಸ್ತುಗಳಿಗೆ ಪರ್ಯಾಯವಾಗಿ ಏನೆಲ್ಲ ವಸ್ತುಗಳನ್ನು ಬಳಸಬಹುದು ಎಂಬುದನ್ನು ಪ್ರದರ್ಶನದಲ್ಲಿ ಇಡಲಾಗಿದೆ. ವಿವಿಧ ಬಗೆಯ ಕಾಗದದ ಲೋಟ, ತಟ್ಟೆ, ಬಟ್ಟೆಯ ಕೈಚೀಲಗಳು ಸೇರಿವೆ. ಯಾವುದೇ ಸಭೆ ಸಮಾರಂಭ ಸೇರಿದಂತೆ ಇತರೆ ಸಂದರ್ಭಗಳಲ್ಲಿ ಈ ವಸ್ತುಗಳನ್ನು ಬಳಸಬೇಕೆಂಬ ಸಂದೇಶ ಇದೆ.

ADVERTISEMENT

ನಿತ್ಯ ವಿವಿಧ ಶಾಲಾ–ಕಾಲೇಜಿನ ಮಕ್ಕಳನ್ನು ಇಲ್ಲಿಗೆ ಕರೆತಂದು ಅದರ ಬಗ್ಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ. ನಗರಸಭೆ ಹಾಗೂ ವಾಲಂಟೀಯರ್‌ ಕ್ಲಬ್‌ ಸಹಭಾಗಿತ್ವದಲ್ಲಿ ಪ್ರದರ್ಶನ ಆಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.