ADVERTISEMENT

ಪಿಂಚಣಿಗಾಗಿ ಪುನರ್ವಸತಿ ಕಲ್ಪಿತ ದೇವದಾಸಿಯರ ಮನವಿ

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:38 IST
Last Updated 29 ಮೇ 2025, 14:38 IST
ಸಿರುಗುಪ್ಪ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಕ್ಷೇಮಾಭಿವೃದ್ಧಿ ತಾಲ್ಲೂಕು ಸಮಿತಿ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿರಸ್ತೇದಾರ ಸಿದ್ದಾರ್ಥ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು
ಸಿರುಗುಪ್ಪ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಕ್ಷೇಮಾಭಿವೃದ್ಧಿ ತಾಲ್ಲೂಕು ಸಮಿತಿ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿರಸ್ತೇದಾರ ಸಿದ್ದಾರ್ಥ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು   

ಪ್ರಜಾವಾಣಿ ವಾರ್ತೆ

ಸಿರುಗುಪ್ಪ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಕ್ಷೇಮಾಭಿವೃದ್ಧಿ ತಾಲ್ಲೂಕು ಸಮಿತಿ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿರಸ್ತೇದಾರ ಸಿದ್ದಾರ್ಥ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಸಿಪಿಎಂ ತಾಲ್ಲೂಕು ಸಂಚಾಲಕ ಅಡಿವೇಪ್ಪ ಮಾತನಾಡಿ, ‘ರಾಜ್ಯದಲ್ಲಿ ಅಂದಾಜು 1 ಲಕ್ಷ ದೇವದಾಸಿ ಕುಟುಂಬಗಳಿದ್ದು, ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳಲ್ಲಿ 15 ಸಾವಿರಕ್ಕಿಂತ ಹೆಚ್ಚು ಕುಟುಂಬಗಳಿವೆ. 2016ರಿಂದ ಸರಿಯಾಗಿ ಪಿಂಚಣಿ ಸಿಗುತ್ತಿಲ್ಲ. 2021ರಲ್ಲಿ ಎನ್.ಪಿ.ಎಸ್. ಜಾರಿಗೊಳಿಸಿದ ನಂತರ ನಮ್ಮ ತಾಲ್ಲೂಕಿನಲ್ಲಿ 200ಕ್ಕಿಂತ ಹೆಚ್ಚು ಜನರಿಗೆ ಪಿಂಚಣಿ ದೊರೆತಿಲ್ಲ. ಅವರ ದಾಖಲೆಗಳಲ್ಲಿರುವ ತಪ್ಪುಗಳನ್ನು ಸರಿಪಡಿಸಲು ಸೂಕ್ತಕ್ರಮ ಕೈಗೊಂಡಿಲ್ಲ’ ಎಂದರು.

ADVERTISEMENT

ದೇವದಾಸಿ ಮಹಿಳೆಯರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷೆ ಹುಲಿಗೆಮ್ಮ, ‘ಕಳೆದ ಮೂರು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಪಿಂಚಣಿಯನ್ನು ಕೂಡಲೇ ಜಮಾ ಮಾಡಬೇಕು. ದೇವದಾಸಿ ಮಹಿಳೆಯರ ಮಾಸಿಕ ವೇತನವನ್ನು ₹5 ಸಾವಿರಕ್ಕೆ ಹೆಚ್ಚಿಸಬೇಕು. ದೇವದಾಸಿ ಮಕ್ಕಳಿಗೆ ಸರ್ಕಾರವೇ ದತ್ತುಪಡೆದು ವಿದ್ಯಾಭ್ಯಾಸ ನೀಡುವ ಜೊತೆಗೆ ಈಗಾಗಲೇ ವಿದ್ಯಾಭ್ಯಾಸ ಮುಗಿಸಿರುವ ಮಕ್ಕಳಿಗೆ ಸೂಕ್ತ ಉದ್ಯೋಗ ನೀಡಬೇಕು’ ಎಂದು ಒತ್ತಾಯಿಸಿದರು.

ದೇವದಾಸಿ ಮಕ್ಕಳ ಸಂಘದ ಅಧ್ಯಕ್ಷ ನಾಗರಾಜ, ಸದಸ್ಯರಾದ ಈರಮ್ಮ, ಲಕ್ಷ್ಮೀ, ಯಂಕಮ್ಮ, ತಾಯಮ್ಮ,ಯಲ್ಲಮ್ಮ, ಎಚ್.ಲಕ್ಷ್ಮಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.