ADVERTISEMENT

ವಿಜಯನಗರ: ನರೇಂದ್ರ ಮೋದಿ ಜನ್ಮದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 13:52 IST
Last Updated 17 ಸೆಪ್ಟೆಂಬರ್ 2021, 13:52 IST
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ತ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಹೊಸಪೇಟೆಯ ಸೋಗಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ವಿತರಿಸಿದರು
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ತ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಹೊಸಪೇಟೆಯ ಸೋಗಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ವಿತರಿಸಿದರು   

ಹೊಸಪೇಟೆ (ವಿಜಯನಗರ): ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 71ನೇ ಜನ್ಮ ದಿನವನ್ನು ಬಿಜೆಪಿ ಪಕ್ಷದಿಂದ ಶುಕ್ರವಾರ ನಗರದಲ್ಲಿ ಆಚರಿಸಲಾಯಿತು.

ಪಟೇಲ್ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಉದ್ಘಾಟಿಸಿದರು. ಪ್ರಧಾನಿಯವರ ಹುಟ್ಟುಹಬ್ಬದ ಅಂಗವಾಗಿ ಕಾರ್ಯಕರ್ತರು ರಕ್ತದಾನ ಮಾಡಿದರು. ತರಕಾರಿ ಮಾರುಕಟ್ಟೆ, ಆಸ್ಪತ್ರೆ, ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಹಂಚಿ ಮೋದಿಯವರ ಕೆಲಸಗಳನ್ನು ಪರಿಚಯಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಮರೇಶ, ಕಾರ್ಯಕರ್ತರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.