ADVERTISEMENT

ಸಂತ್ರಸ್ತೆ ಹೆಸರು ಬಹಿರಂಗ: ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 19 ಜನವರಿ 2026, 4:32 IST
Last Updated 19 ಜನವರಿ 2026, 4:32 IST
<div class="paragraphs"><p>ಸಮಾವೇಶದಲ್ಲಿ ಭಾಷಣ ಮಾಡಿದ್ದ ರಾಮುಲು</p></div>

ಸಮಾವೇಶದಲ್ಲಿ ಭಾಷಣ ಮಾಡಿದ್ದ ರಾಮುಲು

   

– ಪ್ರಜಾವಾಣಿ ಚಿತ್ರ

ಬಳ್ಳಾರಿ: ಪೋಕ್ಸೊ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಜ.18ರಂದು ಎಫ್‌ಐಆರ್‌ ದಾಖಲಾಗಿದೆ.

ADVERTISEMENT

ಬಳ್ಳಾರಿಯಲ್ಲಿ ಜ. 1ರಂದು ನಡೆದಿದ್ದ ಘರ್ಷಣೆ, ಕೊಲೆ ಖಂಡಿಸಿ ಬಿಜೆಪಿಯು ಬಳ್ಳಾರಿಯ ಎಪಿಎಂಸಿ ಪ್ರಾಂಗಣದಲ್ಲಿ ಜ. 17ರಂದು ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿತ್ತು. ಸಮಾವೇಶದಲ್ಲಿ ಭಾಷಣ ಮಾಡುವ ಭರದಲ್ಲಿ ಮಾಜಿ ಸಚಿವ ಶ್ರೀರಾಮುಲು ಪೋಕ್ಸೊ ಸಂತ್ರಸ್ಥೆಯೊಬ್ಬರ ಗುರುತು ಬಹಿರಂಗಪಡಿಸಿದರು.

‘ಶಾಸಕ ಭರತ್‌ ರೆಡ್ಡಿ ಯುವಕರನ್ನು ಯಾವ ಹಂತಕ್ಕೆ ಮಾದಕ ವ್ಯಸನಿಗಳನ್ನಾಗಿ ಮಾಡಿದ್ದಾರೆ ಎಂದರೆ, ನಾಲ್ಕೈದು ಮಂದಿ ವಿದ್ಯಾರ್ಥಿಗಳು ಡ್ರಗ್ಸ್‌ ತೆಗೆದುಕೊಂಡು ನಗರದ ಶಾಲೆಯೊಂದರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾರೆ’ ಎಂದಿದ್ದರು.

ಮುಂದುವರಿದು, ವಿದ್ಯಾರ್ಥಿನಿಯ ಹೆಸರು, ಶಾಲೆ, ತರಗತಿ ಮತ್ತು ಜಾತಿಯನ್ನೂ ಶ್ರೀರಾಮುಲು ಬಹಿರಂಗಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಭಾನುವಾರ ಎಪಿಎಂಸಿ ಠಾಣೆ ಇನ್‌ಸ್ಪೆಕ್ಟರ್‌ ನೀಡಿದ ದೂರು ಆಧರಿಸಿ ಮಹಿಳಾ ಠಾಣೆ ಪೊಲೀಸರು ಪೊಕ್ಸೊ ಕಾಯ್ದೆಯ ಕಲಂ 23(1) (2) ಮತ್ತು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ಸೆಕ್ಷನ್ 74ರ ಅಡಿಯಲ್ಲಿ ಕೇಸು ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.