ADVERTISEMENT

ತೋರಣಗಲ್ಲು: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ದಾಖಲು

​ಪ್ರಜಾವಾಣಿ ವಾರ್ತೆ
Published 14 ಜನವರಿ 2025, 7:20 IST
Last Updated 14 ಜನವರಿ 2025, 7:20 IST
<div class="paragraphs"><p>ಪೋಕ್ಸೊ</p></div>

ಪೋಕ್ಸೊ

   

ತೋರಣಗಲ್ಲು( ಬಳ್ಳಾರಿ): ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಸೋಮವಾರ ಅಪರಿಚಿತನೊಬ್ಬ ಅತ್ಯಾಚಾರವೆಸಗಿದ್ದಾನೆ.

ಘಟನೆ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ADVERTISEMENT

'ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ವೆಸಗಿದ್ದಾನೆ. ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಯಿತು ಎಂದು ಗೊತ್ತಾಗಿದೆ.

ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ. ಮಗುವಿನ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಆಸ್ಪತ್ರೆ ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.