ಕೂಡ್ಲಿಗಿ (ವಿಜಯನಗರ ಜಿಲ್ಲೆ): ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಮಂಜುನಾಥ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 7ರಂದು ಹರಿಹರದಿಂದ ಬಳ್ಳಾರಿಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಕೊಟ್ಟೂರು ತಾಲ್ಲೂಕಿನ ಗಜಾಪುರ ಬಳಿ ತಮ್ಮ ಬೈಕಿಗೆ ತಾಗಿದೆ ಎಂದು ಕೂಡ್ಲಿಗಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಂಜುನಾಥ, ಬಸ್ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದರು.
ಹಲ್ಲೆಗೊಳಗಾಗಿದ್ದ ಬಸ್ ಚಾಲಕ ರಾಮಲಿಂಗಪ್ಪ ನೀಡಿದ ದೂರಿನ ಅನ್ವಯ ಮಂಜುನಾಥ ವಿರುದ್ಧ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.