ADVERTISEMENT

ಸಂಡೂರು | ಪೋಲಿಯೊ ರಹಿತ ರಾಷ್ಟ್ರ ನಿರ್ಮಿಸಿ: ಹಶೀಲ್ದಾರ್ ಅನಿಲ್ ಕುಮಾರ್ ಜಿ.

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 6:20 IST
Last Updated 22 ಡಿಸೆಂಬರ್ 2025, 6:20 IST
ಸಂಡೂರು ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಅವರು ಮಗುವಿಗೆ ಲಸಿಕೆ ಹಾಕಿದರು 
ಸಂಡೂರು ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಅವರು ಮಗುವಿಗೆ ಲಸಿಕೆ ಹಾಕಿದರು    

ಸಂಡೂರು: ‘ತಾಲ್ಲೂಕಿನ ವ್ಯಾಪ್ತಿಯ ಎಲ್ಲ ಗ್ರಾಮಗಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಬೇಕು. ಈ ಮೂಲಕ ಪೋಲಿಯೊ ರಹಿತ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ತಹಶೀಲ್ದಾರ್ ಅನಿಲ್ ಕುಮಾರ್ ಜಿ. ಹೇಳಿದರು.

ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ತಾಲ್ಲೂಕು ಆಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಭರತ್ ಕುಮಾರ್, ತಾಲ್ಲೂಕು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಪವನ್ ಕುಮಾರ್, ಆಯುಷ್ ವೈದಾಧಿಕಾರಿ ಎಂ. ವಿರೂಪಾಕ್ಷ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.