
ಪ್ರಜಾವಾಣಿ ವಾರ್ತೆ
ಕೊಟ್ಟೂರು: ಪಟ್ಟಣದ ಚಾನುಕೋಟಿ ಮಠದ ಮರುಳಸಿದ್ಧಸ್ವಾಮಿ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.
ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಸಕಲ ಮಂಗಲವಾದ್ಯ ಮೇಳಗಳೊಂದಿಗೆ ರಥದ ಬಳಿ ತಂದು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ನಂತರ ಸ್ವಾಮಿಯನ್ನು ಅಲಂಕೃತಗೊಂಡ ರಥದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆ ಭಕ್ತರ ಜಯಘೋಷ ಮೊಳಗಿತು.
ರಥ ಮುಂದೆ ಸಾಗುತ್ತಿದಂತೆ ನೆರದ ಭಕ್ತರು ಬಾಳೆಹಣ್ಣು, ಉತ್ತತ್ತಿ, ದವನ ತೂರಿ ಭಕ್ತಿ ಸಮರ್ಪಿಸಿದರು. ಭಕ್ತ ಸಮೂಹ ರಥ ಸಾಗುವಾಗ ಸ್ವಾಮಿಯ ಜಯಘೋಷಣೆ ಮಾಡುತ್ತಾ ಭಕ್ತಿಭಾವ ಮೆರೆದು ರಥೋತ್ಸವಕ್ಕೆ ಸಾಕ್ಷಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.