ADVERTISEMENT

ಕಳಪೆ ಕಾಮಗಾರಿ, ದೂರು

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 14:37 IST
Last Updated 19 ಆಗಸ್ಟ್ 2019, 14:37 IST
ಭ್ರಷ್ಟಾಚಾರ ನಿರ್ಮೂಲನ ವೇದಿಕೆಯ ಪದಾಧಿಕಾರಿಗಳು ತಹಶೀಲ್ದಾರ್‌ ಕಚೇರಿಯ ಅಧಿಕಾರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು
ಭ್ರಷ್ಟಾಚಾರ ನಿರ್ಮೂಲನ ವೇದಿಕೆಯ ಪದಾಧಿಕಾರಿಗಳು ತಹಶೀಲ್ದಾರ್‌ ಕಚೇರಿಯ ಅಧಿಕಾರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಮೇಲ್ನೋಟಕ್ಕೆ ಕಳಪೆಯಾಗಿರುವುದು ಕಂಡು ಬಂದಿದ್ದು, ಅದರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಸೋಮವಾರ ತಹಶೀಲ್ದಾರ್‌ಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಅಮೃತ ಯೋಜನೆ, ಜಿಲ್ಲಾ ಪಂಚಾಯಿತಿ ಅನುದಾನ, ಎಸ್‌.ಎಫ್‌.ಸಿ. ಎ.ಡಿ.ಬಿ. ಯೋಜನೆಯಡಿ ನೂರಾರು ಕೋಟಿ ರೂಪಾಯಿಯ ಕಾಮಗಾರಿಗಳು ನಡೆಯುತ್ತಿವೆ. ಅದರಲ್ಲೂ ಸಿ.ಸಿ. ರಸ್ತೆ, ಒಳಚರಂಡಿ, ಕುಡಿಯುವ ನೀರಿನ ಕಾಮಗಾರಿ ಪ್ರಗತಿಯಲ್ಲಿವೆ. ಆದರೆ, ಇತ್ತೀಚೆಗೆ ಸುರಿದ ಮಳೆಯಿಂದ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿವೆ. ಚರಂಡಿಗಳು ಉಕ್ಕಿ ಹರಿದಿವೆ. ಇದು ಕಳಪೆ ಕಾಮಗಾರಿಗೆ ಸಾಕ್ಷಿ ಎಂದು ಆರೋಪಿಸಿದ್ದಾರೆ.

ADVERTISEMENT

ಎರಡು ತಾಸು ಮಳೆಗೆ ರಸ್ತೆಗಳ ಸ್ಥಿತಿ ಹೀಗಾಗಿದೆ ಎಂದರೆ, ಭಾರಿ ವರ್ಷಧಾರೆಯಾದರೆ ಹೇಗಾಗಬಾರದು. ಈ ಕುರಿತು ಸಮಗ್ರ ತನಿಖೆ ನಡೆಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಗುಜ್ಜಲ್‌ ನಾಗರಾಜ, ನಿಂಬಗಲ್‌ ರಾಮಕೃಷ್ಣ ಮನವಿಗೆ ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.