ADVERTISEMENT

‘ಪೋಷಣ ಪಕ್ವಾಡ’ ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 11:59 IST
Last Updated 17 ಮಾರ್ಚ್ 2021, 11:59 IST
ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಹೊಸಪೇಟೆ ತಾಲ್ಲೂಕಿನ ಕಮಲಾಪುರದಲ್ಲಿ ಪೋಷಣ ಪಕ್ವಾಡ ಜಾಥಾ ನಡೆಸಿದರು
ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಹೊಸಪೇಟೆ ತಾಲ್ಲೂಕಿನ ಕಮಲಾಪುರದಲ್ಲಿ ಪೋಷಣ ಪಕ್ವಾಡ ಜಾಥಾ ನಡೆಸಿದರು   

ವಿಜಯನಗರ (ಹೊಸಪೇಟೆ): ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ಬುಧವಾರ ‘ಪೋಷಣ ಪಕ್ವಾಡ’ ಜಾಗೃತಿ ಜಾಥಾ ನಡೆಸಲಾಯಿತು.

ಪಟ್ಟಣದ ಐದನೇ ಅಂಗನವಾಡಿ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಹೋಗಲಾಡಿಸುವ ಕುರಿತು ತಿಳಿವಳಿಕೆ ಮೂಡಿಸಿದರು.

ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರ ಸೇವಿಸುವುದರ ಪ್ರಯೋಜನಗಳ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ತಿಳಿಸಿದರು. ಇದೇ ವೇಳೆ ಪಟ್ಟಣದಲ್ಲಿ ಸಸಿಗಳನ್ನು ನೆಟ್ಟರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೇಲ್ವಿಚಾರಕಿ ಸುಜಾತ, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಡಾ. ಬಿ, ಆರ್. ಮಳಲಿ, ಸಮಾಜ ಸೇವಕ ವಿರೇಶ್, ಸುರೇಶ್ ಗೌಡ, ಐದನೇ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮಂಜುಳಾ ಸೇರಿದಂತೆ ಇತರೆ ಅಂಗನವಾಡಿಗಳ ಕಾರ್ಯಕರ್ತೆಯರು, ಸಹಾಯಕಿರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.