
ಪ್ರಜಾವಾಣಿ ವಾರ್ತೆಪ್ರಾತಿನಿಧಿಕ ಚಿತ್ರ
ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ‘ಟೀಂ ಶ್ರೀರಾಮುಲು’ ಎಂಬ ಖಾತೆಯ ಅಡ್ಮಿನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಸಂಬಂಧ ಶಾಸಕ ನಾಗೇಂದ್ರ ಅವರ ಸಾಮಾಜಿಕ ಮಾಧ್ಯಮ ಉಸ್ತವಾರಿ ಎಂ. ಗಾದಿಲಿಂಗ ಅವರು ಬಳ್ಳಾರಿ ಗ್ರಾಮಾಂತರ ಠಾಣೆಯಲ್ಲಿ ಅ. 31ರಂದು ದೂರು ನೀಡಿದ್ದರು.
‘ಟೀಂ ಶ್ರೀರಾಮುಲು’ ಇನ್‌ಸ್ಟಾಗ್ರಾಂನಲ್ಲಿನ ಒಟ್ಟು ಮೂರು ಪೋಸ್ಟ್‌ಗಳಲ್ಲಿ ನಾಗೇಂದ್ರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿತ್ತು. ಅವಹೇಳನಕಾರಿಯಾಗಿ ಬಿಂಬಿಸಲಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ದಾಖಲಾದ ಬೆನ್ನಿಗೇ ಮೂರೂ ಪೋಸ್ಟ್‌ಗಳು ಖಾತೆಯಿಂದ ಡಿಲಿಟ್ ಆಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.