ADVERTISEMENT

ಬಳ್ಳಾರಿ| ರಸ್ತೆಗಳ ಮಧ್ಯೆ ಗುಂಡಿ; ಗಿಡ ನೆಟ್ಟು ಕರವೇ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 1:57 IST
Last Updated 23 ಜನವರಿ 2026, 1:57 IST
ಬಳ್ಳಾರಿ ನಗರದಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕನ್ನಡ ಸಂಘನೆಯ ಕಾರ್ಯಕರ್ತರು ಗುರುವಾರ ಗಡಿಗಿ ಚೆನ್ನಪ್ಪ (ರಾಯಲ್‌) ವೃತ್ತದ ಬಳಿ ಗಿಡಗಳನ್ನಿಟ್ಟು ಪ್ರತಿಭಟನೆ ನಡೆಸಿದರು
ಬಳ್ಳಾರಿ ನಗರದಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕನ್ನಡ ಸಂಘನೆಯ ಕಾರ್ಯಕರ್ತರು ಗುರುವಾರ ಗಡಿಗಿ ಚೆನ್ನಪ್ಪ (ರಾಯಲ್‌) ವೃತ್ತದ ಬಳಿ ಗಿಡಗಳನ್ನಿಟ್ಟು ಪ್ರತಿಭಟನೆ ನಡೆಸಿದರು   

ಬಳ್ಳಾರಿ: ನಗರದಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ (ಪ್ರವೀಣ್ ಶೆಟ್ಟಿ ಬಣ) ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದಲ್ಲಿನ ಗುಂಡಿಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ರಾಜ್ಯ ಸರ್ಕಾರ ಹಾಗೂ ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎಚ್.ಹುಲುಗಪ್ಪ, ‘ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 39 ವಾರ್ಡ್‌ಗಳಿವೆ. ಒಂದೇ ಒಂದು ವಾರ್ಡ್‌ಗಳಲ್ಲಿ ಗುಂಡಿಗಳನ್ನು ಮುಚ್ಚುವ ಕೆಲಸಗಳು ಆಗುತ್ತಿಲ್ಲ. ಗುಂಡಿಗಳಿಂದ ನಿತ್ಯ ಅಪಘಾತಗಳಾಗುತ್ತಿದೆ. ಪಾಲಿಕೆ ನಿರ್ಲಕ್ಷ್ಯ ತೋರಿಸುತ್ತಿದೆ. ತೆರಿಗೆ ಸಂಗ್ರಹಕ್ಕೆ ಮಾತ್ರ ಪಾಲಿಕೆ ಗಮನಹರಿಸುತ್ತಿದ್ದು, ಗುಂಡಿ ಮುಚ್ಚುವ ಕಾರ್ಯಕ್ಕೆ ಕೈ ಹಾಕುತ್ತಿಲ್ಲ’ ಎಂದು ದೂರಿದರು.

ADVERTISEMENT

ನಗರದಲ್ಲಿನ ಗುಂಡಿಗಳನ್ನು ಮುಚ್ಚಲೆಂದೇ ಪಾಲಿಕೆಯು ಬಜೆಟ್‌ನಲ್ಲಿ ₹40 ಲಕ್ಷ ಮೀಸಲು ಇರಿಸಿತ್ತು. ಆ ಹಣ ಏನಾಗಿದೆ ಎಂಬುದೇ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ನಗರದಲ್ಲಿನ ಗುಂಡಿಗಳನ್ನು ಮುಚ್ಚದಿದ್ದರೇ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.