ವಿದ್ಯುತ್ ವ್ಯತ್ಯಯ
ಬಳ್ಳಾರಿ: ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 19ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ತಿಳಿಸಿದೆ.
110/11ಕೆ.ವಿ ಶ್ರೀಧರಗಡ್ಡೆ ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಫೀಡರ್‌ಗಳು ಮತ್ತು 33/11ಕೆ.ವಿ ಗುಡದೂರು ಉಪ-ಕೇಂದ್ರದಿಂದ ವಿದ್ಯುತ್ ಸರಬರಾಜು ಎಲ್ಲಾ 11ಕೆ.ವಿ. ಫೀಡರ್‌ಗಳಲ್ಲಿ ಶನಿವಾರ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರಿ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಅವಂಬಾವಿ. ಅಶೋಕ ನಗರ, ಟಿ.ಎಂ.ಜಿ ಲೇಔಟ್ , ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರದಲ್ಲಿಯೂ ವಿದ್ಯುತ್ ಇರದು ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.