ADVERTISEMENT

ಹೋಟೆಲ್‌ಗಳಿಗೆ ನೋಟಿಸ್‌ ಜಾರಿ

‘ಪ್ರಜಾವಾಣಿ’ ವರದಿ ಫಲಶ್ರುತಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 14:23 IST
Last Updated 7 ಆಗಸ್ಟ್ 2019, 14:23 IST

ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಹೋಟೆಲ್‌ಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

‘ಹೋಟೆಲ್‌ ಕೊಠಡಿಗಳು, ಆಹಾರ ದರದಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಪಟ್ಟಣ ಪಂಚಾಯಿತಿಯ ಐದು ಕಿ.ಮೀ ವ್ಯಾಪ್ತಿಯಲ್ಲಿನ ಐಷಾರಾಮಿ ಸೇರಿದಂತೆ ಎಲ್ಲ ಹೋಟೆಲ್‌ಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಒಂದು ವಾರದೊಳಗೆ ಎಲ್ಲ ಹೋಟೆಲ್‌ನವರು ಕಡ್ಡಾಯವಾಗಿ ಆಹಾರ, ಕೊಠಡಿಗಳ ದರ ಫಲಕ ಕಡ್ಡಾಯವಾಗಿ ಅಳವಡಿಸುವಂತೆ ಸೂಚಿಸಲಾಗಿದೆ’ ಎಂದು ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ಬುಧವಾರ ‘ಪ್ರಜಾವಾಣಿ’ಗೆ ತಿಳಿಸಿದರು.

‘ವಿಶ್ವವಿಖ್ಯಾತ ತಾಣ ಹಂಪಿಗೆ ದೇಶ–ವಿದೇಶಗಳಿಂದ ನಿತ್ಯ ನೂರಾರು ಜನ ಬರುತ್ತಾರೆ. ಹೋಟೆಲ್‌ಗಳವರು ಜನರ ಮುಖ ನೋಡಿಕೊಂಡು ಮನಬಂದಂತೆ ಕೊಠಡಿ, ಆಹಾರಕ್ಕೆ ದರ ನಿಗದಿಪಡಿಸುತ್ತಿದ್ದಾರೆ. ಈ ಕುರಿತು ಸಾರ್ವಜನಿಕರು, ಪ್ರವಾಸಿಗರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ನೋಟಿಸ್‌ ಕೊಡಲಾಗಿದೆ. ಸೂಚಿಸಿದಂತೆ ಹೋಟೆಲ್‌ಗಳವರು ನಡೆದುಕೊಳ್ಳದಿದ್ದಲ್ಲಿ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು. ಯಾರೇ ಪ್ರವಾಸಿಗರಿಂದ ಹೆಚ್ಚಿನ ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಹಂಪಿಯಲ್ಲಿ ಊಟ ಬಲು ದುಬಾರಿ’ ಶೀರ್ಷಿಕೆಯ ಅಡಿಯಲ್ಲಿ ‘ಪ್ರಜಾವಾಣಿ’ ಆಗಸ್ಟ್‌ 4ರಂದು ವಿಶೇಷ ವರದಿ ಪ್ರಕಟಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.