ADVERTISEMENT

ಸೇನೆಯ ಶ್ರೇಯಸ್ಸಿಗೆ ಮಸೀದಿಗಳಲ್ಲಿ ಪ್ರಾರ್ಥನೆ 

​ಪ್ರಜಾವಾಣಿ ವಾರ್ತೆ
Published 9 ಮೇ 2025, 14:45 IST
Last Updated 9 ಮೇ 2025, 14:45 IST
ಭಾರತೀಯ ಸೇನೆಗೆ ಯಶಸ್ಸು ಸಿಗಲೆಂದು ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ಮಸೀದಿಯಲ್ಲಿ ಶುಕ್ರವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು
ಭಾರತೀಯ ಸೇನೆಗೆ ಯಶಸ್ಸು ಸಿಗಲೆಂದು ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ಮಸೀದಿಯಲ್ಲಿ ಶುಕ್ರವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು   

ಬಳ್ಳಾರಿ: ದೇಶ ರಕ್ಷಣೆಯಲ್ಲಿ ತೊಡಗಿರುವ ಸೈನಿಕರಿಗೆ ಯಶಸ್ಸು ಸಿಗಲಿ ಎಂದು ಬಳ್ಳಾರಿ ಜಿಲ್ಲೆಯ ಮಸೀದಿಗಳಲ್ಲಿ ಶುಕ್ರವಾರ ಪ್ರಾರ್ಥನೆ ಸಲ್ಲಿಸಲಾಯಿತು.

‘ಪೆಹಲ್ಗಾಮ್‌ ದಾಳಿಯಲ್ಲಿ ಅಮಾಯಕರ ಜೀವಗಳನ್ನು ಕೊಂದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ. ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ಇದು ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆಯಾಗಿದೆ. ‘ನಮ್ಮ ಸೇನೆ ನಮ್ಮ ಹೆಮ್ಮೆ’ ಎಂದು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಮುಸಲ್ಮಾನರು ಹೇಳಿದರು. 

‘ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಭಯೋತ್ಪಾದಕ ಕೃತ್ಯ ಎಸಗುವ ಉಗ್ರಗಾಮಿ ಸಂಘಟನೆಗಳ ಹುಟ್ಟಡಗಿಸುವ ಹೋರಾಟದಲ್ಲಿ ನಾವೆಲ್ಲರೂ ಕೇಂದ್ರ ಸರ್ಕಾರದ ಜತೆ ಇದ್ದೇವೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.