ADVERTISEMENT

‘ಪಾದಬಾವು ಉಂಟಾದರೆ ಗರ್ಭಿಣಿಯರು ಚಿಕಿತ್ಸೆ ಪಡೆಯಿರಿ’

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:01 IST
Last Updated 8 ಮೇ 2025, 15:01 IST
ಕುರುಗೋಡು ತಾಲ್ಲೂಕಿನ ಕೊಳಗಲ್ಲು ಆಯುಷ್ ಆರೋಗ್ಯ ಕೇಂದ್ರಕ್ಕೆ ಭೇಟಿನೀಡಿದ ಡಿಎಚ್‌ಓ ಡಾ. ಯಲ್ಲಾ ರಮೇಶ್ ಬಾಬು ಗರ್ಭಿಣಿಯರ ಆರೋಗ್ಯ ವಿಚಾರಿಸಿದರು
ಕುರುಗೋಡು ತಾಲ್ಲೂಕಿನ ಕೊಳಗಲ್ಲು ಆಯುಷ್ ಆರೋಗ್ಯ ಕೇಂದ್ರಕ್ಕೆ ಭೇಟಿನೀಡಿದ ಡಿಎಚ್‌ಓ ಡಾ. ಯಲ್ಲಾ ರಮೇಶ್ ಬಾಬು ಗರ್ಭಿಣಿಯರ ಆರೋಗ್ಯ ವಿಚಾರಿಸಿದರು   

ಕುರುಗೋಡು: ಗರ್ಭಿಣಿಯರಲ್ಲಿ ಕಂಡುಬರುವ ಪಾದಗಳ ಬಾವು ಅಪಾಯಕಾರಿಯಾಗಿದ್ದು, ಸಕಾಲಕ್ಕೆ ತಪಾಸಣೆ ಹಾಗೂ ಚಿಕಿತ್ಸೆ ನೀಡಬೇಕು ಎಂದು ಡಿಎಚ್‌ಓ ಡಾ.ಯಲ್ಲಾ ರಮೇಶಬಾಬು ಸೂಚಿಸಿದರು.

ತಾಲ್ಲೂಕಿನ ಕೊಳಗಲ್ಲು ಗ್ರಾಮದ ಆಯುಷ್ಮಾನ್ ಆರೋಗ್ಯಕೇಂದ್ರ ಗುರುವಾರ ಭೇಟಿ ನೀಡಿದ ಅವರು ಟಿಡಿ ಚುಚ್ಚುಮದ್ದು ಪಡೆಯಲು ಆಗಮಿಸಿದ ಗರ್ಭಿಣಿಯರ ಆರೋಗ್ಯ ವಿಚಾರಿಸಿ ಮಾತನಾಡಿದರು.

ಗಂಡಾಂತರ ಗರ್ಭಿಣಿಯರು ಎಂದು ಗುರುತಿಸಿದ ನಂತರ ಅವರು ನಿರಂತರ ನಿಗಾವಣೆಯಲ್ಲಿರಿಸಬೇಕು. ಒಂದು ವೇಳೆ ರಕ್ತದೊತ್ತಡ ಪರೀಕ್ಷೆ ಕೈಗೊಂಡ ನಂತರ ಕಂಡು ಬರುವ ವ್ಯತ್ಯಾಸವನ್ನು ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಶೀಲಿಸಬೇಕು ಎಂದರು.

ADVERTISEMENT

ರಕ್ತಹೀನತೆ ಕಂಡುಬಂದಲ್ಲಿ ಸ್ಥಳೀಯವಾಗಿ ನೀಡುವ ಚಿಕಿತ್ಸೆಯಿಂದ ಗುಣಮುಖವಾಗದಿದ್ದಲ್ಲಿ ತಜ್ಞರ ಬಳಿ ತಪ್ಪದೆ ಕಳುಹಿಸಬೇಕು. ಅಗತ್ಯವಿದ್ದಲ್ಲಿ ಸ್ಕ್ಯಾನ್ ಮಾಡಿಸಬೇಕು ಎಂದು ಸೂಚಿಸಿದರು.

ಅತಿ ಮುಖ್ಯವಾಗಿ ಗರ್ಭಿಣಿಗೆ ಮೇಲ್ಮಟ್ಟದ ಆಸ್ಪತ್ರೆಗೆ ರೇಫರ್ ಮಾಡುವಾಗ 108 ಆರೋಗ್ಯ ಕವಚ ಬರುವ ಸಮಯ ತಡವಾಗುವ ಸಾಧ್ಯತೆ ಇದ್ದಲ್ಲಿ ತಕ್ಷಣವೇ ವೈದ್ಯಾಧಿಕಾರಿಗಳು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಗಂಡಾಂತರ ಗರ್ಭಿಣಿಯರ ಮನೆ ಭೇಟಿ ಹಾಗೂ ಆರೋಗ್ಯದ ಸ್ಥಿತಿ ಕುರಿತು ವೈದ್ಯಾಧಿಕಾರಿಗಳು ತಮ್ಮ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಪ್ರತಿವಾರ ಚರ್ಚಿಸಬೇಕು ಎಂದರು.

ಗಂಭೀರತೆ ಕಂಡುಬಂದರೆ ಕೂಡಲೇ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಬೇಕು ಎಂದು ಸೂಚಿಸಿದರು.

ಸಿದ್ದಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದಿವ್ಯಾ, ಸಮುದಾಯ ಆರೋಗ್ಯ ಅಧಿಕಾರಿ ರ‍್ರಿಸ್ವಾಮಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿಜಯ ಫ್ಲಾರೆನ್ಸ್ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಶ್ವೇತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.