ಬಳ್ಳಾರಿ: ಈಶಾನ್ಯ ಪದವೀಧರರ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ಮಸ್ಟರಿಂಗ್ ಕಾರ್ಯ ನೆರವೇರಿತು. ಮತಪತ್ರ, ಮತಪೆಟ್ಟಿಗೆಗಳನ್ನು ಹೊತ್ತ ಸಿಬ್ಬಂದಿ ಮತದಾನ ಕೇಂದ್ರಗಳಿಗೆ ತೆರಳಿದರು.
ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸಲು ಜಿಲ್ಲೆಯಲ್ಲಿ ಒಟ್ಟು 140 ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನೇಮಿಸಲಾಗಿದೆ. ಈಗಾಗಲೇ ಎರಡು ಹಂತದ ತರಬೇತಿ ನೀಡಲಾಗಿದೆ. ಆರು ಮತಗಟ್ಟೆ ಕೇಂದ್ರಗಳಲ್ಲಿ ಛಾಯಾಗ್ರಹಣ ಮತ್ತು 18 ಮತಗಟ್ಟೆ ಕೇಂದ್ರಗಳಲ್ಲಿ ವೆಬ್‍ಕಾಸ್ಟಿಂಗ್ ನಡೆಯಲಿದೆ.
ಮತದಾರರ ಅನುಕೂಲಕ್ಕಾಗಿ ಈ ಬಾರಿ ಹೋಬಳಿ ಮಟ್ಟದಲ್ಲಿ ಮತದಾನ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಮತದಾನ ಮುಕ್ತಾಯವಾದ ಬಳಿಕ ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಯಲ್ಲಿ ಡಿ-ಮಸ್ಟರಿಂಗ್ ಕಾರ್ಯ ಕೈಗೊಳ್ಳಲಾಗುತ್ತದೆ. ನಂತರ ಬಳ್ಳಾರಿಯ ತಹಶೀಲ್ದಾರ್ ಕಚೇರಿಗೆ ಎಲ್ಲಾ ಮತಪೆಟ್ಟಿಗೆ ಮತ್ತು ದಾಖಲೆಗಳನ್ನು ಕೊಡೊಯ್ದು, ಸುರಕ್ಷಿತವಾಗಿ ಇಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.