ADVERTISEMENT

ಖಾಸಗಿ ಆಸ್ಪತ್ರೆ ವೈದ್ಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2019, 14:41 IST
Last Updated 31 ಜುಲೈ 2019, 14:41 IST
ಖಾಸಗಿ ಆಸ್ಪತ್ರೆ ವೈದ್ಯರು ಬುಧವಾರ ಹೊಸಪೇಟೆಯಲ್ಲಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಖಾಸಗಿ ಆಸ್ಪತ್ರೆ ವೈದ್ಯರು ಬುಧವಾರ ಹೊಸಪೇಟೆಯಲ್ಲಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌.ಎಂ.ಸಿ.) ಮಸೂದೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಬುಧವಾರ ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಅದನ್ನು ಬೆಂಬಲಿಸಿ ನಗರದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸಿದರು.

ಹೊರರೋಗಿಗಳ ವಿಭಾಗ ಬಂದ್‌ ಮಾಡಿದ ವೈದ್ಯರು, ತಾಲ್ಲೂಕು ಕಚೇರಿಗೆ ಬಂದು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

‘ಎನ್‌.ಎಂ.ಸಿ ಮಸೂದೆ ಬಡವರ ವಿರೋಧಿಯಾಗಿದೆ. ಇದರಿಂದ ವೈದ್ಯಕೀಯ ಶಿಕ್ಷಣ ಪಡೆಯುವುದು ಬಡವರಿಗೆ ಕಷ್ಟವಾಗಲಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳ ಶೇ 40ರಷ್ಟು ಸೀಟುಗಳಿಗೆ ಶುಲ್ಕ ನಿಗದಿ ಮಾಡುವ ಅಧಿಕಾರ ಸರ್ಕಾರದ ಬಳಿ ಇರುತ್ತದೆ. ಅನೇಕ ಲೋಪದೋಷಗಳಿಂದ ಕೂಡಿರುವ ಈ ಮಸೂದೆ ಮಂಡಿಸಬಾರದು’ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.