ADVERTISEMENT

ಬಸ್‌ ನಿಲ್ದಾಣ ಅವ್ಯವಸ್ಥೆ ಸರಿಪಡಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 15:28 IST
Last Updated 14 ಸೆಪ್ಟೆಂಬರ್ 2022, 15:28 IST
ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರ ಹೊಸಪೇಟೆ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು
ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರ ಹೊಸಪೇಟೆ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ನಗರದ ಕೇಂದ್ರ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಬಸ್‌ ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ. ಸ್ವಚ್ಛತೆ ಮರೀಚಿಕೆ ಆಗಿದೆ. ಸೂಕ್ತ ಬಸ್‌ ವ್ಯವಸ್ಥೆ ಇಲ್ಲದೇ ಇರುವುದರಿಂದ ಶಾಲಾ, ಕಾಲೇಜಿನ ಮಕ್ಕಳು ಪರದಾಟ ನಡೆಸುತ್ತಿದ್ದಾರೆ. ನಿಲ್ದಾಣದಲ್ಲೇ ಕೆಲವರು ಅಕ್ರಮ ಚಟುವಟಿಕೆ ನಡೆಸುತ್ತಿದ್ದು, ಅದಕ್ಕೆ ತಡೆಯೊಡ್ಡಬೇಕು ಎಂದು ಒತ್ತಾಯಿಸಿದರು.

ವೇದಿಕೆಯ ತಾಲ್ಲೂಕು ಗೌರವ ಅಧ್ಯಕ್ಷ ಗೋವಿಂದಪ್ಪ, ಉಪಾಧ್ಯಕ್ಷ ಲೋಹಿತ್ ನಾಯಕ, ಪ್ರಧಾನ ಕಾರ್ಯದರ್ಶಿ ವಿ. ನಾಗರಾಜ, ಖಜಾಂಚಿ ಸಿ. ಲಿಂಗರಾಜ್, ಕರುನಾಡು ಕ್ರಯಾಶೀಲ ಸಮಿತಿಯ ಅಧ್ಯಕ್ಷ ಪಿ. ವೆಂಕಟೇಶ್, ಉಪಾಧ್ಯಕ್ಷ ಗುಜ್ಜಲ್ ಗಣೇಶ್, ಹಿರಿಯ ಸಲಹೆಗಾರ ಮರಿಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ರುಕ್ಮಿಣಿ ನಾಯಕ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.