ADVERTISEMENT

ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 5:46 IST
Last Updated 20 ನವೆಂಬರ್ 2025, 5:46 IST
ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಹಗರಿಬೊಮ್ಮನಹಳ್ಳಿಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಪದಾಧಿಕಾರಿಗಳು ಉಪ ತಹಶೀಲ್ದಾರ್ ಶಿವಕುಮಾರಗೌಡ ಅವರಿಗೆ ಮನವಿ ಸಲ್ಲಿಸಿದರು
ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಹಗರಿಬೊಮ್ಮನಹಳ್ಳಿಯಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಪದಾಧಿಕಾರಿಗಳು ಉಪ ತಹಶೀಲ್ದಾರ್ ಶಿವಕುಮಾರಗೌಡ ಅವರಿಗೆ ಮನವಿ ಸಲ್ಲಿಸಿದರು   

ಹಗರಿಬೊಮ್ಮನಹಳ್ಳಿ: ‘ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲಾ ಕಾಲೇಜ್ ವಿಲೀನಗೊಳಿಸುವ ಹೆಸರಿನಲ್ಲಿ 5 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸಿದೆ’ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ಜಯಸೂರ್ಯ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧ ಕಚೇರಿಯ ಎದುರು ಎಸ್‌ಎಫ್‌ಐ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವವಹಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಪ್ರಸ್ತುತ 47,492 ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿವೆ. ವರ್ಷದಿಂದ ವರ್ಷಕ್ಕೆ ದಾಖಲಾತಿಯಲ್ಲಿ ತೀವ್ರ ಕುಸಿತ ಕಂಡಿದೆ. ಆದರೆ, ಖಾಸಗಿ ಶಾಲೆ, ಕಾಲೇಜುಗಳ ದಾಖಲಾತಿ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳ ದಾಖಲಾತಿ ಮುಂದಿನ ದಿನಗಳಲ್ಲಿ ಪಾತಾಳಕ್ಕೆ ತಲುಪುವ ಅಪಾಯವಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

‘ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮೂ ಸೌಕರ್ಯ ಒದಗಿಸಬೇಕು, ಖಾಲಿ ಇರುವ 59 ಸಾವಿರ ಶಿಕ್ಷಕರ ನೇಮಕಾತಿ ನಡೆಯಬೇಕು’ ಎಂದರು.

ಉಪತಹಶೀಲ್ದಾರ್ ಶಿವಕುಮಾರ ಗೌಡ ಅವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿ ಮುಖಂಡರಾದ ಪ್ರವೀಣ, ಶ್ರೀನಿವಾಸ, ನಂದೀಶ, ಮಹೇಶ, ಸಂದೀಪ, ಅರ್ಜುನ, ಚಂದ್ರಪ್ಪ, ಸುಭಾಷ್, ಲಿಂಗರಾಜ, ಕಿರಣ, ಜೀವನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.