ADVERTISEMENT

ಕುಡಿವ ನೀರಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2019, 13:50 IST
Last Updated 4 ಅಕ್ಟೋಬರ್ 2019, 13:50 IST
ಕುಡಿಯುವ ನೀರಿಗೆ ಆಗ್ರಹಿಸಿ ಸಾರ್ವಜನಿಕರು ಶುಕ್ರವಾರ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕುಡಿಯುವ ನೀರಿಗೆ ಆಗ್ರಹಿಸಿ ಸಾರ್ವಜನಿಕರು ಶುಕ್ರವಾರ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ: ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಇಲ್ಲಿನ 29 ಮತ್ತು 31ನೇ ವಾರ್ಡಿನ ಜನ ಶುಕ್ರವಾರ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಪೌರಾಯುಕ್ತೆ ಪಿ. ಜಯಲಕ್ಷ್ಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಎರಡೂ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ. ಸ್ಥಳೀಯರು ದುಡ್ಡು ಕೊಟ್ಟು ಹೊರಗಿನಿಂದ ನೀರು ತರಿಸಿಕೊಳ್ಳುತ್ತಿದ್ದಾರೆ. ಅನೇಕ ತಿಂಗಳಿಂದ ಇದು ಹೀಗೆಯೇ ಮುಂದುವರೆದಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಆದಷ್ಟು ಶೀಘ್ರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಸ್ಥಳೀಯರಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಜಯಶ್ರೀ, ಸ್ವರ್ಣ, ಪಿ.ಬಿ. ವಿಜಯಕುಮಾರ, ಜಿ. ದೀಪಾ, ಮಲ್ಲೇಶ್ವರಿ, ಕವಿತಾ, ಹೊನ್ನೂರಮ್ಮ, ಹಯಾದ್‌ ಬಾಷಾ, ನಾಗರಾಜ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.