ADVERTISEMENT

ರೈಲ್ವೆ ಅಂಡರ್‌ಪಾಸ್‌ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 12:37 IST
Last Updated 22 ನವೆಂಬರ್ 2022, 12:37 IST
88 ಮುದ್ಲಾಪುರ ಸಮೀಪ ರೈಲ್ವೆ ಅಂಡರ್‌ಪಾಸ್‌ ನಿರ್ಮಿಸಬೇಕೆಂದು ಆಗ್ರಹಿಸಿ ‘ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಯುತ್‌ ಆರ್ಗನೈಜೇಶನ್‌ (ಎಐಡಿವೈಒ) ಕಾರ್ಯಕರ್ತರು ಮಂಗಳವಾರ ಹೊಸಪೇಟೆ ರೈಲು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು
88 ಮುದ್ಲಾಪುರ ಸಮೀಪ ರೈಲ್ವೆ ಅಂಡರ್‌ಪಾಸ್‌ ನಿರ್ಮಿಸಬೇಕೆಂದು ಆಗ್ರಹಿಸಿ ‘ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಯುತ್‌ ಆರ್ಗನೈಜೇಶನ್‌ (ಎಐಡಿವೈಒ) ಕಾರ್ಯಕರ್ತರು ಮಂಗಳವಾರ ಹೊಸಪೇಟೆ ರೈಲು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ತಾಲ್ಲೂಕಿನ 88 ಮುದ್ಲಾಪುರ ಗ್ರಾಮದ ಬಳಿಯಿರುವ ರೈಲ್ವೆ ಇಲಾಖೆಯ ಎಲ್‌.ಸಿ.ಗೇಟ್‌ 83ರಿಂದ ಗ್ರಾಮಸ್ಥರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ‘ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಯುತ್‌ ಆರ್ಗನೈಜೇಶನ್‌ (ಎಐಡಿವೈಒ) ಕಾರ್ಯಕರ್ತರು ಮಂಗಳವಾರ ನಗರದ ರೈಲು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ದಕ್ಷಿಣ ಪಶ್ಚಿಮ ರೈಲ್ವೆ ಹುಬ್ಬಳ್ಳಿ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಹೆಸರಿಗೆ ಬರೆದ ಮನವಿ ಪತ್ರವನ್ನು ರೈಲು ನಿಲ್ದಾಣದ ಅಧಿಕಾರಿಗೆ ಸಲ್ಲಿಸಿದರು.

ರೈಲ್ವೆ ಗೇಟ್‌ನಿಂದ 88-ಮುದ್ಲಾಪುರ, ಬಸವನದುರ್ಗ, ಕಳ್ಳಿರಾಂಪುರ, ಬೆಳಗೋಡು, ನರಸಾಪುರ ಸೇರಿದಂತೆ ಇತರೆ ಗ್ರಾಮಗಳ ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಹಾಗೂ ಸಾರ್ವಜನಿಕರಿಗೆ ನಿತ್ಯ ಸಂಚರಿಸಲು ಬಹಳ ಸಮಸ್ಯೆ ಆಗುತ್ತಿದೆ. ಪದೇ ಪದೇ ಗೂಡ್ಸ್‌, ಪ್ಯಾಸೆಂಜರ್‌ ರೈಲುಗಳ ಓಡಾಟದಿಂದ ಗೇಟ್‌ ಹಾಕಲಾಗುತ್ತದೆ. ತುರ್ತು ಕೆಲಸಗಳಿಗೆ, ಶಾಲಾ, ಕಾಲೇಜಿಗೆ ವಿದ್ಯಾರ್ಥಿಗಳು ಸೂಕ್ತ ಸಮಯಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ADVERTISEMENT

ಇತ್ತೀಚೆಗೆ ರೈಲ್ವೆ ಗೇಟ್‌ ಹಾಕಿದ್ದರಿಂದ 88 ಮುದ್ಲಾಪುರದ ಬಸವರಾಜ ಎಂಬುವರು ಸಕಾಲಕ್ಕೆ ಆಸ್ಪತ್ರೆ ತಲುಪಲು ಸಾಧ್ಯವಾಗಲಿಲ್ಲ. ಹೃದಯಾಘಾತದಿಂದ ಅವರು ನಿಧನರಾದರು. ಅನೇಕ ಮಹಿಳೆಯರಿಗೆ ಮಾರ್ಗ ಮಧ್ಯದಲ್ಲೇ ಹೆರಿಗೆ ಆಗಿದೆ. ಕೂಡಲೇ ಅಂಡರ್‌ಪಾಸ್‌ ಅಥವಾ ಮೇಲು ಸೇತುವೆ ನಿರ್ಮಿಸಬೇಕು. ಈ ಕುರಿತು ಹಲವು ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.