ADVERTISEMENT

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಸಚಿವ ಆನಂದ್‌ ಸಿಂಗ್ ಮನೆ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 9:55 IST
Last Updated 18 ಸೆಪ್ಟೆಂಬರ್ 2020, 9:55 IST
ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ಶುಕ್ರವಾರ ಹೊಸಪೇಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮನೆ ಎದುರು ಪ್ರತಿಭಟನೆ ನಡೆಸಿ, ಬಳಿಕ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು
ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ಶುಕ್ರವಾರ ಹೊಸಪೇಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮನೆ ಎದುರು ಪ್ರತಿಭಟನೆ ನಡೆಸಿ, ಬಳಿಕ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಅವರು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ ಚರ್ಚೆಗೆ ಒಳಪಡಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ಶುಕ್ರವಾರ ಇಲ್ಲಿನ ರಾಣಿಪೇಟೆಯ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮನೆ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು.

‘ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕು. ಆಯಾ ಜಾತಿಗಳ ಜನಸಂಖ್ಯೆಗೆ ತಕ್ಕಂತೆ ಒಳಮೀಸಲಾತಿ ಜಾರಿಗೆ ತರಬೇಕು. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ರಾಜ್ಯ ಮತ್ತು ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು. ನಿರುದ್ಯೋಗಿ ಯುವಕರಿಗೆ ಮಾಸಿಕ ₹5,000 ನಿರುದ್ಯೋಗ ಭತ್ಯೆ ನೀಡಬೇಕು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಸಮಿತಿ ಜಿಲ್ಲಾ ಸಂಚಾಲಕ ಮರಡಿ ಜಂಬಯ್ಯ ನಾಯಕ, ಜಿಲ್ಲಾ ಸಹ ಸಂಚಾಲಕ ಬಿಸಾಟಿ ತಾಯಪ್ಪ ನಾಯಕ, ತಾಲ್ಲೂಕು ಸಂಚಾಲಕ ಎಸ್‌. ಸತ್ಯಮೂರ್ತಿ, ಮುಖಂಡರಾದ ಬಿ. ರಮೇಶ್‌ ಕುಮಾರ್‌, ಬಿಸಾಟಿ ಮಹೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.