ADVERTISEMENT

ಹಂಪಿಯಲ್ಲಿ ಪುಷ್ಕರಣಿ ಪತ್ತೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2018, 14:07 IST
Last Updated 31 ಆಗಸ್ಟ್ 2018, 14:07 IST
ಹಂಪಿಯಲ್ಲಿ ಶುಕ್ರವಾರ ಪತ್ತೆಯಾಗಿರುವ ಪುಷ್ಕರಣಿ
ಹಂಪಿಯಲ್ಲಿ ಶುಕ್ರವಾರ ಪತ್ತೆಯಾಗಿರುವ ಪುಷ್ಕರಣಿ   

ಹೊಸಪೇಟೆ: ತಾಲ್ಲೂಕಿನ ಹಂಪಿಯಲ್ಲಿ ನೀರಿನ ಅರವಟಿಗೆ ಸಮೀಪ ಶುಕ್ರವಾರ ಪುಷ್ಕರಣಿ ಪತ್ತೆಯಾಗಿದೆ.

ಕಳೆದ ಎರಡ್ಮೂರು ತಿಂಗಳಿಂದ ಈ ಭಾಗದಲ್ಲಿ ಉತ್ಖನನ ನಡೆಯುತ್ತಿದ್ದು, ಇತ್ತೀಚೆಗೆ ನೀರಿನ ಪೈಪ್‌ಲೈನ್‌ ಕುರುಹು ಪತ್ತೆಯಾಗಿತ್ತು. ಅದೇ ಜಾಗದಿಂದ ಸ್ವಲ್ಪವೇ ದೂರದಲ್ಲಿ ಶುಕ್ರವಾರ ಪುಷ್ಕರಣಿ ಪತ್ತೆಯಾಗಿದೆ.

‘ವಿಜಯನಗರ ಕಾಲದ ಪೈಪ್‌ಲೈನ್‌ ಕುರುಹು ಪತ್ತೆಯಾಗಿದ್ದ ಸ್ಥಳದಿಂದ ಸ್ವಲ್ಪವೇ ದೂರದಲ್ಲಿ ಪುಷ್ಕರಣಿ ಪತ್ತೆಯಾಗಿದ್ದು, ಅದಕ್ಕೆ ಸಂಪರ್ಕ ಕಲ್ಪಿಸಿರುವ ಸಾಧ್ಯತೆ ಇದೆ. ಉತ್ಖನನ ಕೆಲಸ ಪೂರ್ಣಗೊಂಡ ಬಳಿಕವಷ್ಟೇ ಅದರ ಬಗ್ಗೆ ಸಮಗ್ರ ಮಾಹಿತಿ ಗೊತ್ತಾಗಲಿದೆ’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ (ಎ.ಎಸ್‌.ಐ.) ಹಂಪಿ ವೃತ್ತದ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಎರಡು ತಿಂಗಳ ಹಿಂದೆ ಹಂಪಿ ವಿರೂಪಾಕ್ಷೇಶ್ವರ ದೇಗುಲದ ಆವರಣದಲ್ಲಿ ಪುಷ್ಕರಣಿ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.