ADVERTISEMENT

ಎರಡನೇ ಹಂತದ ಬೆಳೆ ನಷ್ಟ ಸಮೀಕ್ಷೆ ಆರಂಭ: ಆರ್‌. ಅಶೋಕ್‌

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 14:35 IST
Last Updated 17 ಸೆಪ್ಟೆಂಬರ್ 2020, 14:35 IST
ಆರ್‌. ಅಶೋಕ್‌
ಆರ್‌. ಅಶೋಕ್‌   

ಹೊಸಪೇಟೆ: ‘ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜ್ಯದ ನಾನಾ ಭಾಗಗಳಲ್ಲಿ ನೆರೆ ಬಂದು ಅಪಾರ ಬೆಳೆ ನಷ್ಟವಾಗಿದೆ. ಈಗ ಎರಡನೇ ಹಂತದ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ಪರಿಹಾರ ವಿತರಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಭರವಸೆ ನೀಡಿದರು.

ಗುರುವಾರ ಇಲ್ಲಿನ ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಮೊದಲನೇ ಹಂತದ ಸಮೀಕ್ಷೆ ಪೂರ್ಣಗೊಂಡಿದ್ದು, ಕೇಂದ್ರ ಸರ್ಕಾರವು ₹395 ಕೋಟಿ ಪರಿಹಾರ ನೀಡಿದೆ.ಎರಡನೇ ಹಂತದ ಸಮೀಕ್ಷೆ ಪೂರ್ಣಗೊಳಿಸಿ, ಸಮಸ್ಯೆಯ ಸುಳಿಗೆ ಸಿಲುಕಿದವರಿಗೆ ಪರಿಹಾರ ವಿತರಿಸಲಾಗುವುದು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.