ನಂದಿನಿ ಹಾಲು
ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೇಯ ದಿನವಾದ ಮಂಗಳವಾರ ಎರಡು ನಾಮಪತ್ರ ಸಲ್ಲಿಕೆಯಾಗಿವೆ.
ವಿಜಯನಗರ ಜಿಲ್ಲೆಯ ಜಿ.ನಾಗಮಣಿ ಎರಡು ಉಮೇದುವಾರಿಕೆ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನ. ಜುಲೈ 3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅದೇ ದಿನ ಕ್ರಮಬದ್ಧ ನಾಮಪತ್ರಗಳ ಘೋಷಣೆ ಮಾಡಲಾಗುತ್ತದೆ.
ನಾಮಪತ್ರ ಹಿಂಪಡೆಯಲು ಜುಲೈ 4 ಕೊನೆಯ ದಿನ. ಜುಲೈ 10ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ರಾಬಕೊವಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಚುನಾವಣಾಧಿಕಾರಿ ಪಿ.ಪ್ರಮೋದ್ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.