ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ರಹೀಂ ಖಾನ್ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 5:22 IST
Last Updated 17 ಸೆಪ್ಟೆಂಬರ್ 2024, 5:22 IST
   

ಬಳ್ಳಾರಿ: ಕಲ್ಯಾಣ ಕರ್ನಾಟಕ ಉತ್ಸವ ದಿನ ಅಂಗವಾಗಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ನಗರದ ಸರ್ಕಾರಿ ಪದವಿ ಪೂರ್ವ(ಮಾ.ಪು) ಕಾಲೇಜು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಈ.ತುಕಾರಾಂ,ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್,ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.