ADVERTISEMENT

ಬಳ್ಳಾರಿ | ರಾಹುಲ್ ಗಾಂಧಿ ಸಮಾವೇಶಕ್ಕೆ ಖರ್ಗೆ, ಡಿಸಿಎಂ ಗೈರು?

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2024, 15:21 IST
Last Updated 25 ಏಪ್ರಿಲ್ 2024, 15:21 IST
ರಾಹುಲ್‌ ಗಾಂಧಿ ಅವರ ಸಮಾವೇಶಕ್ಕೆ ನಗರದ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಎಐಸಿಸಿ ಕಾರ್ಯದರ್ಶಿ ಮಯೂರ್ ಜೈಕುಮಾರ್ ಪರಿಶೀಲಿಸಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ಲಂ ಪ್ರಶಾಂತ್‌ ಪಾಲ್ಗೊಂಡಿದ್ದರು
ರಾಹುಲ್‌ ಗಾಂಧಿ ಅವರ ಸಮಾವೇಶಕ್ಕೆ ನಗರದ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಎಐಸಿಸಿ ಕಾರ್ಯದರ್ಶಿ ಮಯೂರ್ ಜೈಕುಮಾರ್ ಪರಿಶೀಲಿಸಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಲ್ಲಂ ಪ್ರಶಾಂತ್‌ ಪಾಲ್ಗೊಂಡಿದ್ದರು   

ಬಳ್ಳಾರಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಸಮಾವೇಶ ಶುಕ್ರವಾರ ನಡೆಯಲಿದ್ದು, ನಗರದ ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ಭರದಿಂದ ಸಿದ್ಧತೆಗಳು ಸಾಗಿದವು.

ಸಮಾವೇಶಕ್ಕೆ ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆಗಳಿದ್ದು, ಮೈದಾನದಲ್ಲಿ ಆಸನ, ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗುತ್ತಿದೆ. ವೇದಿಕೆ ಮೇಲೆ 50 ಮುಖಂಡರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. 

ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಗೈರಾಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್‌ ಸುರ್ಜೆವಾಲ ಸಮಾವೇಶಕ್ಕೆ ಹಾಜರಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ADVERTISEMENT

ಸಮಾವೇಶಕ್ಕೆ ಬರುವ ಜನರಿಗೆ ನೀರು ಮತ್ತು ಮಜ್ಜಿಗೆ ವಿತರಣೆ ನಡೆಯಲಿದೆ. 

ಭಾರಿ ಸರಕು ವಾಹನಗಳ ಸಂಚಾರ ನಿರ್ಬಂಧ: ಕಾಂಗ್ರೆಸ್‌ ಸಮಾವೇಶ ಹಿನ್ನೆಲೆಯಲ್ಲಿ ಏ. 26ರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬಳ್ಳಾರಿ ನಗರದಲ್ಲಿ ಹೊಸಪೇಟೆಯಿಂದ ಸಿರುಗುಪ್ಪ ಕಡೆಗೆ ಹೋಗುವ ಹಾಗೂ ಸಿರುಗುಪ್ಪದಿಂದ ಹೊಸಪೇಟೆ ಮತ್ತು ಬೆಂಗಳೂರು ರಸ್ತೆ ಕಡೆಗೆ ಚಲಿಸುವ ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.