ADVERTISEMENT

ಕಂಪ್ಲಿ ಸುತ್ತಮುತ್ತ ಮಳೆ: ಜನಜೀವನ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 20 ಮೇ 2025, 15:30 IST
Last Updated 20 ಮೇ 2025, 15:30 IST
ಕಂಪ್ಲಿ ರೈತ ಸಂಪರ್ಕ ಕೇಂದ್ರ ಮುಂಭಾಗದಲ್ಲಿ ಮಳೆ ನೀರು ಸಂಗ್ರಹವಾಗಿರುವ ದೃಶ್ಯ
ಕಂಪ್ಲಿ ರೈತ ಸಂಪರ್ಕ ಕೇಂದ್ರ ಮುಂಭಾಗದಲ್ಲಿ ಮಳೆ ನೀರು ಸಂಗ್ರಹವಾಗಿರುವ ದೃಶ್ಯ   

ಕಂಪ್ಲಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಬಿಟ್ಟು ಬಿಡದೇ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆಯಿಂದ ಇಡೀ ವಾತಾವರಣ ತಂಪಾಗಿದೆ. ಆದರೆ, ವಿದ್ಯುತ್ ವ್ಯತ್ಯಯದಿಂದ ಕೆಲವೆಡೆ ಕುಡಿಯುವ ನೀರಿನ ಸರಬರಾಜಿನಲ್ಲಿ ಅಡಚಣೆ ಮತ್ತು ಕೆಲ ಹಳ್ಳಿಗಳಲ್ಲಿ ಗುಡುಗು ಸಿಡಿಲಿಗೆ ವಿದ್ಯುತ್ ಪೂರೈಕೆ ಇಲ್ಲದೆ ತೊಂದರೆ ಮುಂದುವರಿದಿರುವುದು ಸಾಮಾನ್ಯವಾಗಿತ್ತು. ಅಲ್ಲಲ್ಲಿ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗಿರುವುದು ಕಂಡುಬಂತು.

ಪಟ್ಟಣದಲ್ಲಿ ಮಂಗಳವಾರ ವಾರದ ಸಂತೆ ಇದ್ದರೂ ಮಳೆಯಿಂದಾಗಿ ತರಕಾರಿ, ಸೊಪ್ಪು ಕೊಳ್ಳುವವರಿಲ್ಲದೆ ಮಾರುಕಟ್ಟೆ ಬಿಕೋ ಎನ್ನುತ್ತಿತ್ತು. ಎರಡು ದಿನದಿಂದ ಮಳೆಯಾಗುತ್ತಿರುವುದರಿಂದ ಮಳೆಯಾಶ್ರಿತ ಭೂಮಿಗಳು, ನೀರಾವರಿ ವ್ಯಾಪ್ತಿಯ ಹೊಲ ಗದ್ದೆಗಳು ಹದವಾಗಿರುವುದರಿಂದ ರೈತರು ಮಾಗಿ ಉಳುಮೆಗೆ ಸಿದ್ಧತೆ ನಡೆಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.