ADVERTISEMENT

ಹೊಸಪೇಟೆಯಲ್ಲಿ ಜಿಟಿಜಿಟಿ ಮಳೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 12:36 IST
Last Updated 16 ಜುಲೈ 2019, 12:36 IST
ಮಂಗಳವಾರ ಸಂಜೆ ಹೊಸಪೇಟೆಯಲ್ಲಿ ಜಿಟಿಜಿಟಿ ಮಳೆಯಾಗಿದ್ದರಿಂದ ಜನ ಕೊಡೆಗಳನ್ನು ಹಿಡಿದುಕೊಂಡು ಹೆಜ್ಜೆ ಹಾಕಿದರು
ಮಂಗಳವಾರ ಸಂಜೆ ಹೊಸಪೇಟೆಯಲ್ಲಿ ಜಿಟಿಜಿಟಿ ಮಳೆಯಾಗಿದ್ದರಿಂದ ಜನ ಕೊಡೆಗಳನ್ನು ಹಿಡಿದುಕೊಂಡು ಹೆಜ್ಜೆ ಹಾಕಿದರು   

ಹೊಸಪೇಟೆ: ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಮಂಗಳವಾರ ಜಿಟಿಜಿಟಿ ಮಳೆಯಾಯಿತು.

ಮಧ್ಯಾಹ್ನ ಮೂರು ಗಂಟೆಗೆ ಕೆಲಸಮಯ ಸುರಿದ ಮಳೆ ಬಿಡುವು ಪಡೆದುಕೊಂಡಿತು. ಸಂಜೆ ನಾಲ್ಕೂವರೆ ಸುಮಾರಿಗೆ ಪುನಃ ಆರಂಭಗೊಂಡಿತು.

ಹಲವು ದಿನಗಳಿಂದ ಮೋಡ ಕವಿದ ವಾತಾವರಣ ಇರುತ್ತಿದೆ. ಆದರೆ, ಮಳೆಯಾಗಿಲ್ಲ. ಮಂಗಳವಾರ ಏಕಾಏಕಿ ಮಳೆಯಾಗಿದ್ದರಿಂದ ವಾತಾವರಣ ಸಂಪೂರ್ಣ ತಂಪಾಗಿತ್ತು. ಜಿಟಿಜಿಟಿ ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ಜನರ ಓಡಾಟ ವಿರಳವಾಗಿತ್ತು.

ADVERTISEMENT

ತಾಲ್ಲೂಕಿನ ಹೊಸೂರು, 88 ಮುದ್ಲಾಪುರ, ಬಸವನದುರ್ಗ, ನಾಗೇನಹಳ್ಳಿ, ಕೊಂಡನಾಯಕನಹಳ್ಳಿ, ಮಲಪನಗುಡಿ, ಹೊಸ ಮಲಪನಗುಡಿ, ಕಮಲಾಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.