ADVERTISEMENT

ಉದ್ಧವ್‌ ಠಾಕ್ರೆ ಹೇಳಿಕೆಗೆ ಖಂಡನೆರಕ್ಷಣಾ ವೇದಿಕೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 10:01 IST
Last Updated 18 ಜನವರಿ 2021, 10:01 IST
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸೋಮವಾರ ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ: ‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲಾಗುವುದು’ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಕೊಟ್ಟಿರುವ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು. ‘ರಾಜ್ಯದ ಒಂದಿಂಚೂ ಭಾಗ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ನಮ್ಮ ರಾಜ್ಯದ ನೆಲ, ಜಲ, ಭಾಷೆಯ ವಿಷಯದಲ್ಲಿ ಹೊರಗಿನವರು ಮೂಗು ತೂರಿಸಬಾರದು. ಶಾಂತಿ ಕದಡುವ ಕೆಲಸವೂ ಮಾಡಬಾರದು’ ಎಂದು ಮನವಿಯಲ್ಲಿ ತಿಳಿಸಿದರು.

‘ಮಹಾರಾಷ್ಟ್ರ ಮುಖ್ಯಮಂತ್ರಿಯವರ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ನಮ್ಮ ರಾಜ್ಯದ ವಿಷಯದಲ್ಲಿ ಮೂಗು ತೂರಿಸದಂತೆ ಸ್ಪಷ್ಟವಾಗಿ ತಿಳಿಸಬೇಕು. ಒಂದುವೇಳೆ ಸರ್ಕಾರ ರಾಜ್ಯದ ವಿಷಯದಲ್ಲಿ ಕಠಿಣವಾಗಿ ನಡೆದುಕೊಳ್ಳದಿದ್ದರೆ ಸಂಘಟನೆಯ ವತಿಯಿಂದ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜ್ಯಘಟ್ಟ ರವಿ, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಷಣ್ಮುಖ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಕಟ್ಟಾ ಸ್ವಾಮಿ, ಕಟೇಶ್, ಜಯಂತ್‌, ಚೆಲುವಕಾಶಿ, ಮಹೇಶ್, ಮಂಜು, ಆನಂದ್ ನಾಗರಾಜ, ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.