ADVERTISEMENT

ಬಳ್ಳಾರಿ: ಧ್ವಜಾರೋಹಣ ನೆರವೇಸಿದ ಸಚಿವ ರಹೀಂ ಖಾನ್

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 4:01 IST
Last Updated 26 ಜನವರಿ 2025, 4:01 IST
   

ಬಳ್ಳಾರಿ: ನಗರದ ವಿಮ್ಸ್ ಮೈದಾನದಲ್ಲಿ ಭಾನುವಾರ ನಡೆದ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಪೊಲೀಸ್ ಇಲಾಖೆಯಿಂದ ಒಟ್ಟು 30 ತುಕಡಿಗಳ ಪಥ ಸಂಚಲನ ನಡೆಯಿತು. ವಿವಿಧ ಕ್ಷೇತ್ರಗಳ ಸಾಧಕರು, ಗಣ್ಯರನ್ನು ಸಚಿವರು ಸನ್ಮಾನಿಸಿದರು.

ಇದಕ್ಕೂ ಮುನ್ನ, ಎಚ್.ಆರ್.ಗವಿಯಪ್ಪ ವೃತ್ತದಲ್ಲಿರುವ ಬೃಹತ್ ಧ್ವಜಸ್ಥಂಭದಲ್ಲಿ ಧ್ವಜಾರೋಹಣ ನೆರವೇರಿಸಿದರು. ನಂತರ ಅಂಬೇಡ್ಕರ್ ಉದ್ಯಾನದಲ್ಲಿ ಸಂವಿಧಾನ ಪೀಠಿಕೆಯ ಗ್ರಾನೈಟ್ ಫಲಕ ಅನಾವರಣಗೊಳಿಸಿದರು.

ADVERTISEMENT

ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್, ಗೈಡ್ಸ್ ಹಾಗೂ ಪೊಲೀಸರು ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾ ರಾಣಿ ವಿ.ಜೆ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.