
ಹರಪನಹಳ್ಳಿ: ಗಣ ರಾಜ್ಯೋತ್ಸವ ದಿನ ದೆಹಲಿಯಲ್ಲಿ ಜರುಗುವ ಆಕರ್ಷಕ ಪಥಸಂಚಲನ ನಮ್ಮ ದೇಶದ ಹೆಮ್ಮೆ ಹಾಗೂ ಮಾದರಿಯಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.
ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 31 ರಾಜ್ಯಗಳ ಸ್ತಬ್ಧ ಚಿತ್ರಗಳು, ಅಶ್ವಪಡೆ, ವಾಯುಪಡೆ, ಸೈನಿಕರನ್ನು ಒಳಗೊಂಡಿರುವ ಫೆರೆಡ್ ಆಕರ್ಷಕವಾಗಿರುತ್ತದೆ. ಈ ಬಾರಿ ರಾಜ್ಯದ 13 ಜನ ಕನ್ನಡಿಗರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿರುವುದು ಸಂತೋಷ ತಂದಿದೆ ಎಂದು ಸ್ಮರಿಸಿದರು.
ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ಟಿ ಸುರೇಶ್ ಕುಮಾರ್ ಸಂದೇಶ ನೀಡಿದರು. ಆವರಣದಲ್ಲಿ ಆಕರ್ಷಕ ಪಥಸಂಚಲನ, ಧ್ವಜ ವಂದನೆ ಜರುಗಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು, ಕ್ರೀಡಾಪಟುಗಳು, ಉತ್ತಮ ಸರ್ಕಾರಿ ನೌಕರರನ್ನು ತಾಲ್ಲೂಕು ಆಡಳಿತ ಪುರಸ್ಕರಿಸಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು.
ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಎಂ.ಉದಯಶಂಕರ, ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ವೈ.ಎಚ್.ಚಂದ್ರಶೇಖರ, ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಡಿವೈಎಸ್ಪಿ ಸಂತೋಷ ಚೌವ್ಹಾಣ್, ಸಿಪಿಐ ಮಹಾಂತೇಶ ಸಜ್ಜನ್, ಸಹಾಯಕ ನಿರ್ದೇಶಕ ಗಂಗಪ್ಪ, ಪಿಎಸ್ಐ ಶಂಭುಲಿಂಗ ಹಿರೇಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.