ADVERTISEMENT

ಸ್ವಚ್ಛ ಭಾರತ ಆಂದೋಲನ ಯಶಸ್ಸಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2019, 13:22 IST
Last Updated 8 ಆಗಸ್ಟ್ 2019, 13:22 IST
ಆದರ್ಶ ಮಹಿಳಾ ಸಂಘದ ಸದಸ್ಯರು ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು
ಆದರ್ಶ ಮಹಿಳಾ ಸಂಘದ ಸದಸ್ಯರು ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ಸ್ವಚ್ಛ ಭಾರತ ಆಂದೋಲನದ ಯಶಸ್ವಿಗೆ ಎಲ್ಲ ಸರ್ಕಾರಿ ಕಚೇರಿಗಳು ಕೈಜೋಡಿಸಬೇಕೆಂದುಆದರ್ಶ ಮಹಿಳಾ ಸಂಘ ಮನವಿ ಮಾಡಿದೆ.

ಈ ಸಂಬಂಧ ಸಂಘದ ಸದಸ್ಯರು ಗುರುವಾರ ನಗರಸಭೆ ಪೌರಾಯುಕ್ತ ವಿ. ರಮೇಶ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಿದರು.

‘ಸ್ವಚ್ಛ ಭಾರತ ಆಂದೋಲನಕ್ಕೆ ಎಲ್ಲರೂ ಕೈಜೋಡಿಸಿದರಷ್ಟೇ ಯಶಸ್ವಿಯಾಗಲು ಸಾಧ್ಯ. ಅದರಲ್ಲೂ ಸರ್ಕಾರಿ ಕಚೇರಿಗಳ ಪಾತ್ರ ಮಹತ್ವದ್ದಾಗಿದೆ. ದೈನಂದಿನ ಕೆಲಸಗಳ ಜತೆಗೆ ಸುತ್ತಮುತ್ತಲಿನ ಪರಿಸರ, ಜನಜೀವನದ ಸಮಗ್ರ ಅಭಿವೃದ್ಧಿಗೆ ಒತ್ತು ಕೊಡುವ ಕೆಲಸ ಸರ್ಕಾರಿ ಕಚೇರಿಗಳು ಮಾಡಬೇಕು’ ಎಂದು ಕೋರಿದರು.

ADVERTISEMENT

ಸಂಘದ ಅಧ್ಯಕ್ಷೆ ಸುನೀತಾ, ಸದಸ್ಯರಾದ ಲಕ್ಷ್ಮಿ, ವಿಕಾಸ ಯುವಕ ಮಂಡಳ ಅಧ್ಯಕ್ಷ ಗೋಸಲ ಬಸವರಾಜ್, ಸದಸ್ಯರಾದ ನಾಗರಾಜ್, ರಿಯಾಜ್, ಪ್ರಶಾಂತ, ಸುರೇಶ್, ಪವನ್, ಅಕ್ಷಯ್, ಚಂದ್ರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.