ADVERTISEMENT

ಹೊಸಪೇಟೆ: ₹1.65 ಕೋಟಿಯಲ್ಲಿ ಎರಡು ರಸ್ತೆ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 12:07 IST
Last Updated 16 ಜುಲೈ 2021, 12:07 IST
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ ಅವರು ಶುಕ್ರವಾರ ಹೊಸಪೇಟೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ ಅವರು ಶುಕ್ರವಾರ ಹೊಸಪೇಟೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು   

ಹೊಸಪೇಟೆ (ವಿಜಯನಗರ): ₹1.65 ಕೋಟಿ ಮೊತ್ತದ ಎರಡು ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.

2020–21ನೇ ಸಾಲಿನ ಜಿಲ್ಲಾ ಖನಿಜ ನಿಧಿಯಲ್ಲಿ ₹90 ಲಕ್ಷದಲ್ಲಿ ನಗರದ ಉದ್ಯೋಗ ಪೆಟ್ರೋಲ್‌ ಬಂಕ್‌ನಿಂದ ಮೇನ್‌ ಬಜಾರ್‌, ಬಳ್ಳಾರಿ ವೃತ್ತದವರೆಗೆ, ₹75 ಲಕ್ಷದಲ್ಲಿ ರಾಮಲಿ ಸ್ವಾಮಿ ಮಸೀದಿಯಿಂದ ಚಪ್ಪರದಹಳ್ಳಿ ಮೂಲಕ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ವರೆಗಿನ ರಸ್ತೆ ಅಭಿವೃದ್ಧಿ ಕಾಣಲಿದೆ.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ ಕಾಮಗಾರಿಗೆ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕರಾದ ಧರ್ಮೇಂದ್ರ ಸಿಂಗ್‌, ಸಂದೀಪ್‌ ಸಿಂಗ್‌, ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ, ಅಯ್ಯಾಳಿ ತಿಮ್ಮಪ್ಪ, ಟಿಂಕರ್‌ ರಫೀಕ್‌, ಕಲಂದರ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.