ADVERTISEMENT

ಶ್ರೀಗಂಧ ಕಳವು ಯತ್ನ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 1:31 IST
Last Updated 9 ಸೆಪ್ಟೆಂಬರ್ 2020, 1:31 IST
ಹೂವಿನಹಡಗಲಿ ತಾಲ್ಲೂಕು ತುಂಬಿನಕೇರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಸಾಗಿಸಲು ಯತ್ನಿಸಿದ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ
ಹೂವಿನಹಡಗಲಿ ತಾಲ್ಲೂಕು ತುಂಬಿನಕೇರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಸಾಗಿಸಲು ಯತ್ನಿಸಿದ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ   

ಹೂವಿನಹಡಗಲಿ: ತಾಲ್ಲೂಕಿನ ತುಂಬಿನಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಸಾಗಿಸಲು ಯತ್ನಿಸಿದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರು ಕ್ಯಾಂಪಿನ ಶಬ್ಬೀರ್‌ ಅಹ್ಮದ್, ಅಮಾನುಲ್ಲಾ, ನೂರ್ ಜಹಾನ್ ಬಂಧಿತರು.

‘ತುಂಬಿನಕೇರಿ ಅರಣ್ಯವನ್ನು ಅಕ್ರಮವಾಗಿ ಪ್ರವೇಶಿಸಿದ್ದ ಆರೋಪಿಗಳು ಎರಡು ಶ್ರೀಗಂಧದ ಮರಗಳನ್ನು ಕಡಿದು, 10 ಕೆ.ಜಿ. ತೂಕದ 30 ತುಂಡುಗಳನ್ನು ಸಾಗಿಸಲು ತಯಾರಿ ನಡೆಸಿದ್ದರು. ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ಸೆರೆ ಹಿಡಿದೆವು. ಕೃತ್ಯಕ್ಕೆ ಬಳಸಿದ ಕೊಡಲಿ, ಗುದ್ದಲಿ, ಕಂದಲಿ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದೇವೆ’ ಎಂದು ವಲಯ ಅರಣ್ಯಾಧಿಕಾರಿ ಕಿರಣಕುಮಾರ್ ಕಲ್ಲಮ್ಮನವರ ತಿಳಿಸಿದರು.

ADVERTISEMENT

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿದ್ದರಾಮಪ್ಪ ಚಳಕಾಪುರೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಡಿ.ಮೋಹನ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಡಿ.ವೈ.ಸಾಗರ್, ಸಿಬ್ಬಂದಿ ದುಷ್ಯಂತಗೌಡ, ಚಂದ್ರನಾಯ್ಕ, ಸಂತೋಷ ಹಾವನೂರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.