ಸಂಡೂರು: ‘ಕಟ್ಟಡ ಕಾರ್ಮಿಕರ ವಸತಿ ನಿರ್ಮಾಣಕ್ಕೆ ₹5ಲಕ್ಷ ಸಹಾಯ ಧನ, ವಿದ್ಯಾರ್ಥಿ ವೇತನ, ಹೆರಿಗೆ, ಮದುವೆ ಸೇರಿದಂತೆ ಇತರೆ ಸೌಲಭ್ಯಗಳಿಗೆ ಸರ್ಕಾರವು ಶೀಘ್ರವಾಗಿ ಸೂಕ್ತ ಸಹಾಯ ಧನವನ್ನು ಸಕಾಲಕ್ಕೆ ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕ ಸಂಘದ ಸಂಡೂರು ತಾಲ್ಲೂಕು ಅಧ್ಯಕ್ಷ ವಿ.ದೇವಣ್ಣ ಮಾತನಾಡಿದರು.
ತಾಲ್ಲೂಕಿನ ಹೊಸದರೋಜಿ ಗ್ರಾಮದಲ್ಲಿ ಬುಧವಾರ ಕರ್ನಾಟಕ ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕ ಸಂಘದ ಸಂಡೂರು ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ತಾಲ್ಲೂಕು ಸಮಾವೇಶದ ಕರ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
‘ನೈಜ ಕಟ್ಟಡ ಕಾರ್ಮಿಕರಿಗೆ ಹೊಸ ನೊಂದಾವಣಿಗಾಗಿ ಸೂಕ್ತ ಕ್ರಮವಹಿಸಬೇಕು. ಬಡ ಕಾರ್ಮಿಕರು ತಮ್ಮ ಸುಂದರ ಬದುಕನ್ನು ಕಟ್ಟಿಕೊಳ್ಳಲು 1996 ರ ಸರ್ಕಾರದ ಕಾರ್ಮಿಕ ಕಾನೂನುಗಳನ್ನು ಸಮಪರ್ಕವಾಗಿ ಜಾರಿಗೊಳಿಸಿಬೇಕು. ಮುಂದಿನ ದಿನಗಳಲ್ಲಿ ಕಾರ್ಮಿಕರ ಸಾಮಾವೇಶವನ್ನು ಹಮ್ಮಿಕೊಳ್ಳಲಾಗುವುದು’ ಎಂದರು.
ಸಂಘದ ಮುಖಂಡರಾದ ಶಂಕಣ್ಣ, ಹಾಲಸ್ವಾಮಿ, ತಿಮ್ಮಪ್ಪ, ಸಣ್ಣರಂಗಸ್ವಾಮಿ, ವಿವಿಧ ಗ್ರಾಮಗಳ ಸದಸ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.