ಸಂಡೂರು: ತಾಲ್ಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಭಾನುವಾರ ಮಹಾಯೋಗಿ ವೇಮನ ಜಯಂತಿಯ ಆಚರಣೆಯನ್ನು ಪಂಚಾಯಿತಿ ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಆಚರಿಸಿ, ವೇಮನ, ರೆಡ್ಡಿ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದ ರೆಡ್ಡಿ ಸಮಾಜದ ಮುಖಂಡ ಸಂತೋಷ್ ರೆಡ್ಡಿ ಸೋಮವಾರ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ವೇಮನ ಭಾವ ಚಿತ್ರವಿಟ್ಟು ಪೂಜೆ ಸಲ್ಲಿಸಿಲ್ಲ. ಗ್ರಾಮದಲ್ಲಿ ಬಹಳಷ್ಟು ರೆಡ್ಡಿ ಸಮುದಾಯವದರು ವಾಸವಿದ್ದು, ಜಯಂತಿಯನ್ನು ಯಾಕೆ ಆಚರಣೆ ಮಾಡಿಲ್ಲ ಎಂದು ಅಧಿಕಾರಿಗಳನ್ನು ವಿಚಾರಿಸಲಾಗಿದೆ.
ನಂತರ ಮಧ್ಯಾಹ್ನ 3ಕ್ಕೆ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದ್ದಾರೆ. ಮುಖಂಡರನ್ನು ಪೂಜೆಗೆ ಸಹ ಆಹ್ವಾನಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.