ADVERTISEMENT

ಸಂಡೂರು ಅಪಘಾತ: ಅಪರಿಚಿತ ಚಾಲಕನ ಮೇಲೆ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 27 ಮೇ 2025, 15:28 IST
Last Updated 27 ಮೇ 2025, 15:28 IST
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)   

ಬಳ್ಳಾರಿ: ಸಂಡೂರಿನ ಜೈಸಿಂಗಪುರ ಬಳಿ ಸೋಮವಾರ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಲಾರಿಯ (KA13B–5548) ಚಾಲಕನ ಮೇಲೆ ಸಂಡೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಘಟನೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳು ನೀಡಿದ ದೂರು ಆಧರಿಸಿ ಪೊಲೀಸರು ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳು ಮತ್ತು ಭಾರತೀಯ ಮೋಟಾರು ವಾಹನ ಕಾಯಿದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

ಸಂಡೂರು–ಹೊಸಪೇಟೆ ರಸ್ತೆಯಲ್ಲಿ ಲಾರಿ ಚಾಲಕ ಅತಿವೇಗವಾಗಿ, ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ADVERTISEMENT

ಅಪಘಾತದ ಬಳಿಕ ಅಪರಿಚಿತ ಚಾಲಕ ಲಾರಿಯಿಂದ ಇಳಿದು ಓಡಿ ಹೋಗಿದ್ದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. 

ಲಾರಿಯು ಕೊಪ್ಪಳದ ಗಿಣಿಗೇರದ ವ್ಯಕ್ತಿಯೊಬ್ಬರ ಮಾಲೀತ್ವದ್ದು ಎನ್ನಲಾಗಿದ್ದು, ಅದರ ಚಾಲಕ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.