ಸಂಡೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಇ.ತುಕಾರಾಂ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಗೆಲುವಿಗೆ ಅಭಿನಂದನೆ ತಿಳಿಸಿದರು.
ಉಪಚುನಾವಣೆಯಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣಾ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದು, ಫಲಿತಾಂಶ ಬಂದ ನಂತರ ಪಕ್ಷದ ವರಿಷ್ಠರನ್ನು ಭೇಟಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.