
ಸಂಡೂರು: ‘ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಪಾಲಕರ, ಶಿಕ್ಷಕರ ಮಾತುಗಳನ್ನು ನಿರ್ಲಕ್ಷಿಸಬಾರದು. ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣವು ವಿದ್ಯಾರ್ಥಿಗಳ ಮಾನಸಿಕ ವ್ಯಕ್ತಿತ್ವದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು ಮಕ್ಕಳು ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಳ್ಳಬೇಕು’ ಸಂಡೂರಿನ ಬಿಕೆಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ರುದ್ರಗೌಡ ಹೇಳಿದರು.
ತಾಲ್ಲೂಕಿನ ಕೃಷ್ಣಾನಗರ ಗ್ರಾಮದ ಬಿಕೆಜಿ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಕೆಜಿ ಸಮೂಹ ವಿದ್ಯಾಸಂಸ್ಥೆಯ ಸಂಕಲ್ಪ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಜೀವನದ ಗುರಿಯಿಂದ ವಂಚಿತರಾಗುತ್ತಿದ್ದು ಸಾಮಾಜಿಕ ಮಾಧ್ಯಮಗಳ ವಾಸ್ತವಿಕತೆಯನ್ನು ಅರಿತು ವಿವೇಕಪೂರ್ವಕವಾಗಿ ಬಳಸಲು ಪಾಲಕರು ಸೂಕ್ತ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು.
ಬಿಕೆಜಿ ಸಮೂಹ ಸಂಸ್ಥೆಯ ಟ್ರಸ್ಟಿ ವೀಣಾ ಪಾಟೀಲ್, ಪ್ರಾಂಶುಪಾಲ ಕೆ.ವಿ. ಮೋಹನ್ ರಾವ್, ಉಪಪ್ರಾಂಶುಪಾಲ ಸಂತೋಷ ಜಟ್ಟಿ, ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿ, ಪಾಲಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.