ಮತಯಂತ್ರಗಳನ್ನು ಇರಿಸಿರುವ ಸ್ಟ್ರಾಂಗ್ ರೂಮ್ ಅನ್ನು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಚುನಾವಣಾಧಿಕಾರಿ ಸಮ್ಮುಖ ತೆಗೆಯಲಾಯಿತು
ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಇಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿವೆ.
ಮತ ಎಣಿಕೆ ಕೇಂದ್ರಕ್ಕೆ ಬರುತ್ತಿರುವ ಸಿಬ್ಬಂದಿಯನ್ನು ಪೊಲೀಸರು ಕಾಲೇಜಿನ ಮುಖ್ಯ ದ್ವಾರದ ಬಳಿಯೇ ಪರಿಶೀಲಿಸಿ ಒಳಗೆ ಬಿಡುತ್ತಿದ್ದಾರೆ.
ನಗರ ಡಿಎಸ್ಪಿ ಚಂದ್ರಕಾಂತ ನಂದಾರೆಡ್ಡಿ ಭದ್ರತೆಯ ಉಸ್ತುವಾರಿ ವಹಿಸಿದ್ದಾರೆ.
ಬೆಳಗ್ಗೆ 7ಕ್ಕೆ ಸರಿಯಾಗಿ ಸ್ಟ್ರಾಂಗ್ ರೂಮ್ ಅನ್ನು ತೆರೆಯಲಿರುವ ಅಧಿಕಾರಿಗಳು, ಪರಿಶೀಲನೆ ಬಳಿಕ 8 ಗಂಟೆಗೆ ಸರಿಯಾಗಿ ಮತ ಎಣಿಕೆ ಕಾರ್ಯ ಪ್ರಾರಂಭಿಸಿಲಿದ್ದಾರೆ.
ಒಟ್ಟು 19 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕ್ಷೇತ್ರದ ಚುನಾವಣಾ ಅಧಿಕಾರಿಯು ಆದ ವಿಭಾಗೀಯ ಅಧಿಕಾರಿ ರಾಜೇಶ್ ಎಚ್. ಡಿ ತಿಳಿಸಿದ್ದಾರೆ.
ಬಹುತೇಕ ಮಧ್ಯಾಹ್ನದ ಹೊತ್ತಿಗೆ ಸಂಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರ ಬೀಳುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.