ADVERTISEMENT

ಸಂಡೂರು: ಮದ್ಯದಂಗಡಿಯಲ್ಲಿ ಕಳ್ಳತನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 5:37 IST
Last Updated 1 ಆಗಸ್ಟ್ 2025, 5:37 IST
ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹಣ, ಚಿನ್ನ ದರೋಡೆ
ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹಣ, ಚಿನ್ನ ದರೋಡೆ    

ಸಂಡೂರು: ಪಟ್ಟಣದ ಬಳ್ಳಾರಿ ರಸ್ತೆಯಲ್ಲಿನ ಮದ್ಯದಂಗಡಿಯೊಂದರ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ನಗದು ಹಣ ದೋಚಿ ಪರಾರಿಯಾದ ಘಟನೆ ಈಚೆಗೆ ನಡೆದಿದೆ.

ಕಳೆದ ಸೋಮವಾರ ರಾತ್ರಿ ಕಳ್ಳರು ಅಂಗಡಿಯ ಬೀಗ ಮುರಿದು ಒಳನುಗ್ಗಿದ್ದರು. ಕೌಂಟರ್‌ನಲ್ಲಿದ್ದ ₹10,000 ನಗದು ದೋಚಿ ಪರಾರಿಯಾಗಿದ್ದಾರೆ. ಪಕ್ಕದಲ್ಲಿದ್ದ ಬೇಕರಿ, ಜನರಲ್ ಸ್ಟೋರ್‌ ಬೀಗ ಒಡೆಯಲು ಪ್ರಯತ್ನಿಸಿ ವಿಫಲರಾಗಿದ್ದಾರೆ.

ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.