ಸಂಡೂರು (ಬಳ್ಳಾರಿ ಜಿಲ್ಲೆ): ಸಂಡೂರು ತಾಲ್ಲೂಕಿನ ಕಾಳಿಂಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ದೀಕ್ಷಾ (12) ದಿಢೀರ್ ಮೃತಪಟ್ಟಿದ್ದಾಳೆ.
ಶಾಲೆಗೆ ಹೋಗಲು ಬೆಳಿಗ್ಗೆ ಸಿದ್ಧವಾಗುತ್ತಿದ್ದ ವೇಳೆ ಕುಸಿದು ಬಿದ್ದ ದೀಕ್ಷಾ, ಚಿಕಿತ್ಸೆಗಾಗಿ ಸಂಡೂರಿಗೆ ಕರೆದೊಯ್ಯವ ಮಾರ್ಗ ಮಧ್ಯೆ ಸಾವನ್ನಪ್ಪಿದಳು.
‘ಬಾಲಕಿಯ ಮರಣೋತ್ತರ ಪರೀಕ್ಷೆ ಬಂದ ಬಳಿಕವಷ್ಟೇ ಸಾವಿಗೆ ಕಾರಣ ಗೊತ್ತಾಗಲಿದೆ’ ಎಂದು ಸಂಡೂರು ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪವನ್ ಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.