ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 5:28 IST
Last Updated 20 ಜುಲೈ 2021, 5:28 IST
 ಸಂಡೂರಿನ ಕೃಪಾನಿಲಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳನ್ನು  ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಯಿತು
 ಸಂಡೂರಿನ ಕೃಪಾನಿಲಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳನ್ನು  ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಯಿತು   

ಸಂಡೂರು: ತಾಲ್ಲೂಕಿನ 19 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿಯ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಿತು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಯಿತು. ಸ್ಯಾನಿಟೈಸರ್ ಹಾಕಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿತ್ತು. ಅಂತರವನ್ನು ಕಾಪಾಡಲು ಶಾಲಾ ಆವರಣದಲ್ಲಿ ಬಾಕ್ಸ್‌ ಹಾಕಲಾಗಿತ್ತು. ಒಂದು ಕೊಠಡಿಯಲ್ಲಿ ಕೇವಲ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಪರೀಕ್ಷೆಗ ಹಾಜರಾದ ಪ್ರತಿ ವಿದ್ಯಾರ್ಥಿಗೆ ಮಾಸ್ಕ್, ಅರ್ಧ ಲೀಟರ್‌ ನೀರಿನ ಬಾಟಲ್ ಹಾಗೂ ಬಿಸ್ಕತ್‌ ಪ್ಯಾಕೇಟ್‌ ನೀಡಲಾಗಿತ್ತು.

ತೋರಣಗಲ್ಲಿನ ಆದರ್ಶ ವಿದ್ಯಾಲಯದ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿನಿ ಅನಾರೋಗ್ಯದ ನಿಮಿತ್ತ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾಳೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿಯವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.