ADVERTISEMENT

ಸಂಡೂರು: ರುದ್ರಭೂಮಿಗೆ ಮೂಲಸೌಲಭ್ಯ ಕಲ್ಪಿಸಲು ರಾಜ್ಯ ಮಸಣ ಕಾರ್ಮಿಕ ಸಂಘದ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 7:15 IST
Last Updated 26 ಫೆಬ್ರುವರಿ 2026, 7:15 IST
ಸಂಡೂರಿನ ಸಾರ್ವಜನಿಕ ರುದ್ರಭೂಮಿಗೆ ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕ ಸಂಘದ ಮುಖಂಡರು ಪುರಸಭೆಯ ಮುಖ್ಯಾಧಿಕಾರಿ ವಿನಯಕುಮಾರ ಗೌಡ ಅವರಿಗೆ ಮನವಿ ಸಲ್ಲಿಸಿದರು
ಸಂಡೂರಿನ ಸಾರ್ವಜನಿಕ ರುದ್ರಭೂಮಿಗೆ ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕ ಸಂಘದ ಮುಖಂಡರು ಪುರಸಭೆಯ ಮುಖ್ಯಾಧಿಕಾರಿ ವಿನಯಕುಮಾರ ಗೌಡ ಅವರಿಗೆ ಮನವಿ ಸಲ್ಲಿಸಿದರು   

ಸಂಡೂರು: ಪಟ್ಟಣದ ಹೊರ ವಲಯದಲ್ಲಿನ ಸಾರ್ವಜನಿಕ ರುದ್ರಭೂಮಿಗೆ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕ ಸಂಘದ ಮುಖಂಡರು ಪುರಸಭೆ‌ ಮುಖ್ಯಾಧಿಕಾರಿ ವಿನಯಕುಮಾರ ಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಸ್ವಾಮಿ ಮಾತನಾಡಿ, ‘ಪಟ್ಟಣದಲ್ಲಿನ ಸಾರ್ವಜನಿಕ ರುದ್ರಭೂಮಿಗೆ ಸರಿಯಾದ ರಸ್ತೆ ನಿರ್ಮಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸುತ್ತಲು ತಡೆಗೋಡೆ ನಿರ್ಮಿಸುವ ಜೊತೆಗೆ ಸಸಿಗಳನ್ನು ನೆಟ್ಟು ಸುಂದರ ಪರಿಸರ ನಿರ್ಮಾಣ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಮುಖಂಡರಾದ ಮಾರೆಪ್ಪ, ಎಸ್.ಪಕ್ಕೀರಪ್ಪ, ಕುಮಾರಸ್ವಾಮಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.