ಬಳ್ಳಾರಿ: ಎರಡು ದಿನಗಳ ‘ಸಂಗಂ ಸಾಹಿತ್ಯ ಪುರಸ್ಕಾರ’ ಪ್ರದಾನ ಸಮಾರಂಭ ಇಂದಿನಿಂದ ಆರಂಭವಾಗಲಿದೆ. ಭಾನುವಾರ ಪ್ರಶಸ್ತಿ ವಿಜೇತರ ಘೋಷಣೆಯಾಗಲಿದೆ.
ಬಳ್ಳಾರಿಯ ಜ್ಞಾನಾಮೃತ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಕ್ತ ವರ್ಷದ ಪುರಸ್ಕೃತರ ಹೆಸರನ್ನು ಘೋಷಿಸಲಾಗುತ್ತದೆ. ಇದರ ಜೊತೆಗೆ ‘ಕನ್ನಡ ಸಮಕಾಲೀನ ಸಾಹಿತ್ಯ ಸ್ವರೂಪ ಹಾಗೂ ಸಂವೇದನೆ - ಮಾತುಕತೆ’ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಬಳ್ಳಾರಿಯ ಸಂಗಂ ಟ್ರಸ್ಟ್, ಸಾಹಿತ್ಯದ ಚಟುವಟಿಕೆಗಳಿಗಾಗಿ ಸ್ಥಾಪಿತವಾಗಿದ್ದು, ಸಮಕಾಲೀನ ಸೃಜನಶೀಲ ಪ್ರತಿಭೆಗಳನ್ನು ಗುರುತಿಸುತ್ತಾ ಸಾಗಿದೆ. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಿ, ವಿಚಾರ ಸಂಕಿರಣಗಳನ್ನು ನಡೆಸುತ್ತಾ ಈ ಸಂಸ್ಥೆ ಸಾಹಿತ್ಯ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಜೀವಂತವಾಗಿರಿಸಿದೆ.
2022-24ವರೆಗೆ ಪ್ರಕಟಗೊಂಡ ಕಾದಂಬರಿ ಪ್ರಕಾರಕ್ಕೆ ‘ಸಂಗಂ ಸಾಹಿತ್ಯ ಪುರಸ್ಕಾರ’ ನೀಡಲು ತೀರ್ಮಾನಿಸಲಾಗಿದೆ. ಪ್ರಸ್ತುತ ಪ್ರಶಸ್ತಿ ಸುತ್ತಿನ ಐದು ಕಾದಂಬರಿಕಾರರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯಾಸಕ್ತರೆಲ್ಲರೂ ಭಾಗವಹಿಸಬೇಕಾಗಿ ಸಂಸ್ಥೆ ಮನವಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.